ಹಾಸನದಲ್ಲಿ ಘೋರ ಘಟನೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, ಮುಗಿಲು ಮುಟ್ಟಿದ ಆಕ್ರಂದನ; Video Viral!

ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಇನ್ನು ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.

ಪ್ರತ್ಯಕ್ಷ ದೃಶ್ಯ
ಮದ್ದೂರು ಕೋಮು ಗಲಭೆ: ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com