
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಅತಿಥಿ ಗೃಹವಾದ ಕುಮಾರ ಕೃಪಾ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ರಚಿಸಿದ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಸರ್ಕಾರಿ ಅತಿಥಿ ಗೃಹದ ವ್ಯವಸ್ಥಾಪಕ ಅವಿನಾಶ್ ಎಸ್ ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕಿಡಿಗೇಡಿಗಳು https://kumarakrupaaguesthouse.com ಎಂಬ ನಕಲಿ ವೆಬ್'ಸೈಟ್ ರಚಿಸಿದ್ದು, ಕೊಠಡಿ ಬುಕಿಂಗ್ನೀಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಹಾಗೂ ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಈ ಮೂಲಕ ವಂಚನೆ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಆನ್‌ಲೈನ್‌ನಲ್ಲಿ ಕೊಠಡಿಗಳನ್ನು ಬುಕ್ ಮಾಡಿರುವುದಾಗಿ ಹೇಳಿಕೊಂಡು ಹಲವಾರು ಜನರು ಅತಿಥಿ ಗೃಹವನ್ನು ಸಂಪರ್ಕಿಸಿದ್ದು, ನಂತರವೇ ನಕಲಿ ವೆಬ್ ಸೈಟ್ ಕುರಿತು ಮಾಹಿತಿ ತಿಳಿದುಬಂದಿತ್ತು.
ಪಂಜಾಬ್‌ನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ನಕಲಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಫೋನ್ ಸಂಖ್ಯೆಗೆ ಹಣವನ್ನು ವರ್ಗಾಯಿಸಿದ್ದು. ಇದರಿಂದ 12,000 ರೂ.ಗಳನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ಅಪರಾಧ ತನಿಖಾ ಇಲಾಖೆಯಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಯೊಬ್ಬರು ಈ ಸಂಖ್ಯೆಯನ್ನು ನ್ಯಾಯಾಧೀಶರಿಗೆ ನೀಡಿದ್ದಾರೆಂದು ತಿಳಿದುಬಂದಿದೆ. ಇದೀಗ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
Advertisement