ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ವೈದ್ಯಕೀಯ ಜಾಮೀನು ಮಂಜೂರು

ಇಡಿ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯ ಎದುರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
Satish Krishna Sail
ಸತೀಶ್ ಸೈಲ್
Updated on

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ವಿಶೇಷ ನ್ಯಾಯಾಲಯವು ಅನಾರೋಗ್ಯದ ಹಿನ್ನೆಲೆಯಲ್ಲಿ 7 ದಿನಗಳ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿ ಗುರುವಾರ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಂಧನಕ್ಕೊಳಗಾಗಿದ್ದ ಸತೀಶ್ ಸೈಲ್ ಅವರನ್ನು ಎರಡು ದಿನಗಳ ಅವಧಿಗೆ ಇ ಡಿ ಕಸ್ಟಡಿಗೆ ಬುಧವಾರ ನೀಡಲಾಗಿತ್ತು.

ಆದರೆ, ಇಡಿ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯ ಎದುರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಸತೀಶ್ ಸೈಲ್ ಅವರು ದೀರ್ಘಕಾಲದಿಂದ ಲಿವರ್ ಸೈರೋಸಿಸ್ ಮತ್ತು ಸ್ಲೀಪ್ ಆಪ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ, ಅವರ ಪರ ವಕೀಲರು ವೈದ್ಯಕೀಯ ಮಧ್ಯಂತರ ಜಾಮೀನು ಕೋರಿದರು. ಇದರಂತೆ ನ್ಯಾಯಾಲಯವು ವಿಚಾರಣೆ ನಡೆಸಿ, ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿ ಏಳು ದಿನಗಳ ಕಾಲ ಜಾಮೀನು ನೀಡಲು ಒಪ್ಪಿಗೆ ನೀಡಿದೆ.

Satish Krishna Sail
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: 'ಕೈ' ಶಾಸಕ ಸತೀಶ್ ಸೈಲ್ ಬಂಧನ

ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಅರ್ ದಾಖಲಿಸಿಕೊಂಡಿದ್ದ ಇ.ಡಿ ಸಹ ತನಿಖೆ ಆರಂಭಿಸಿತ್ತು. ಇದೇ ಆಗಸ್ಟ್‌ 13 ಮತ್ತು 14ರಂದು ಸತೀಶ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ರೂ.13 ಕೋಟಿಯಷ್ಟು ನಗದು ಮತ್ತು ಚಿನ್ನಾಭರಣ ವಶಕ್ಕೆ ಪಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸತೀಶ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಮಂಗಳವಾರ ಸೈಲ್ ಅವರು ಇಡಿಯ ಶಾಂತಿನಗರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಆದಾಗ್ಯೂ, ಅವರು ತನಿಖೆಗೆ ಸಹಕರಿಸದ ಕಾರಣ, ವಶಕ್ಕೆ ಪಡೆಯಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com