
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದಿಂದ ಇತ್ತೀಚಿಗೆ ವಿಚಾರಣೆಗೆ ಒಳಗಾಗಿದ್ದ ಯು ಟ್ಯೂಬರ್ ಎಂ.ಡಿ. ಸಮೀರ್ ಹೊಸ ವಿಡಿಯೋ ಮಾಡಿದ್ದಾರೆ.
ಯು ಟ್ಯೂಬ್ ನಲ್ಲಿ 'ಬುರುಡೆ Media? ಷಡ್ಯಂತ್ರ? No More Lies' ಶೀರ್ಷಿಕೆಯಡಿ ವಿಡಿಯೋ ಬಿಡುಗಡೆ ಮಾಡಿರುವ ಸಮೀರ್, ಕಳೆದ ಒಂದೂವರೆ ತಿಂಗಳಿನಿಂದ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ವಿದೇಶದಿಂದ ನನಗೆ ಫಂಡಿಂಗ್ ಆಗಿದೆ ಎಂದು ಆರೋಪಿಸಲಾಗಿದೆ. ಆದರೆ ನನಗೆ ಯಾವುದೇ ರೀತಿಯ ವಿದೇಶಿ ಹಣ ಬಂದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ತನ್ನ ಬ್ಯಾಂಕ್ ಖಾತೆಗೆ ಯಾವುದೇ ಫಂಡಿಂಗ್ ಆಗಿಲ್ಲ ಎಂಬ ಬಗ್ಗೆ ತನ್ನ ಬಳಿ ಇರುವ ಎರಡು ಬ್ಯಾಂಕ್ ಖಾತೆಗಳ ವಿವರbನ್ನು ನೀಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ನನ್ನ ವಿರುದ್ಧದ ಆರೋಪಗಳು ಸುಳ್ಳು ಎಂದಿದ್ದಾರೆ.
Advertisement