
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. 22 ದಿನದಲ್ಲಿ 106 ಕೋಟಿ ರೂಪಾಯಿ ಸಂಗ್ರಹವಾಗಿದೆ. ಒಟ್ಟಾರೆ 37,86,123 ಪ್ರಕರಣಗಳು ಇತ್ಯರ್ಥವಾಗಿವೆ. ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಶೇಕಡ 50ರಷ್ಟು ರಿಯಾಯಿತಿಯಡಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಅವಕಾಶ ನೀಡಲಾಗಿತ್ತು.
Advertisement