
ಬೆಂಗಳೂರು: ಬೆಂಗಳೂರಿನ ಕಾಟನ್‌ಪೇಟೆ ಪ್ರದೇಶದಲ್ಲಿ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕಾಟನ್‌ಪೇಟೆ ನಿವಾಸಿ ಅಂಜದೇವಿ ಅವರು ಶುಕ್ರವಾರ ಸಂಜೆ 5.30 ರ ಸುಮಾರಿಗೆ ಬೆಂಗಳೂರಿನ ಕಾಟನ್‌ಪೇಟೆಯ ಮಿಲ್ ರಸ್ತೆಯಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಸರಕು ಸಾಗಣೆ ವಾಹನವೊಂದು ಅವರ ಮೇಲೆ ಹರಿದಿದೆ.
ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಜೊತೆಗಿದ್ದ ಮತ್ತೊಬ್ಬ ಮಹಿಳೆ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸರಕು ಸಾಗಣೆ ವಾಹನ ಮಹಿಳೆ ಮೇಲೆ ಹರಿದ ನಂತರ ಇತರ ಏಳು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ನಾಲ್ಕು ಬೈಕ್‌ಗಳು ಮತ್ತು ಮೂರು ಕಾರುಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಕು ಸಾಗಣೆ ವಾಹನದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement