ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ; ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತಂದ್ರೆ ಜೋಕೆ ಎಂದ ಸಿಎಂ ಸಿದ್ದರಾಮಯ್ಯ! Video

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು.
CM Siddaramaiah and  Pratap Simha Casual Images
ಸಿಎಂ ಸಿದ್ದರಾಮಯ್ಯ, ಮಾಜಿ ಸಂಸದ ಪ್ರತಾಪ್ ಸಿಂಹ ಸಾಂದರ್ಭಿಕ ಚಿತ್ರ
Updated on

ಮೈಸೂರು: ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆಗೆ ಆರಂಭದಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತರುವ ಕೆಲಸ ಮಾಡಿದ್ರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು.

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು. ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ನಾನೂ ಕೂಡ ಒಬ್ಬ ಹಿಂದೂ, ನನ್ನ ಹೆಸರಿನಲ್ಲಿ ಎರಡೂ ದೇವರ ಹೆಸರಿದೆ: ಬಿಜೆಪಿ ನಾಯಕ ಸಿ. ಟಿ. ರವಿ, ಬಸನಗೌಡ ಪಾಟೀಲ್​ ಯತ್ನಾಳ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಸಿಎಂ, ಬಿಜೆಪಿಯವರು ಪ್ರಚೋದನಾಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ, ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದು ಹೇಳಿದರು.

ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.

CM Siddaramaiah and  Pratap Simha Casual Images
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ: ಹೈಕೋರ್ಟ್ ನಲ್ಲಿ ಮತ್ತೆ ಎರಡು PIL ಸಲ್ಲಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com