ಕೇತಗಾನಹಳ್ಳಿ ಸರ್ಕಾರಿ ಭೂಮಿ ಒತ್ತುವರಿ: ಕೇಂದ್ರ ಸಚಿವ HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎರಡು ವಾರ ತಡೆ

14 ಎಕರೆ ಜಮೀನಿನ ಮಾಲೀಕತ್ವದ ಕುರಿತಂತೆ ವಿಚಾರಣೆ ನಡೆಸಲು ಐಎಎಸ್‌ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿತ್ತು. ಎಸ್‌ಐಟಿ ರಚನೆ ಮತ್ತು ತಹಶೀಲ್ದಾರ್ ಹೊರಡಿಸಿದ ನೋಟಿಸ್‌ಗೆ ಹೈಕೋರ್ಟ್‌ ಏಕಸದಸ್ಯ ಪೀಠ ತಡೆ ನೀಡಿತ್ತು.
HD Kumaraswamy
ಎಚ್‌ಡಿ ಕುಮಾರಸ್ವಾಮಿonline desk
Updated on

ಬೆಂಗಳೂರು: ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಭೂ ಒತ್ತುವರಿ ಆರೋಪ ಸಂಬಂಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಡೆ ನೀಡಿದೆ.

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಆರೋಪ ಕುರಿತು ತನಿಖೆ ಮುಂದುವರಿಸುವಂತೆ ತಹಶೀಲ್ದಾರ್‌ಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ನ್ಯಾ. ಪಂಕಜ್‌ ಮಿತ್ತಲ್‌ ಹಾಗೂ ನ್ಯಾ.ಪಿ.ಬಿ. ವರಾಳೆ ಅವರಿದ್ದ ನ್ಯಾಯಪೀಠ ಸೋಮವಾರ ತಡೆ ನೀಡಿದೆ.

ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ಕೇತಗಾನಹಳ್ಳಿಯ ಸರ್ವೆ ನಂಬರ್‌ 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು 2020ರಲ್ಲಿ ಹೈಕೋರ್ಟ್‌ ಆದೇಶಿಸಿತ್ತು. ಆದರೆ, ಈ ಆದೇಶವನ್ನು ಜಾರಿಗೊಳಿಸಿಲ್ಲ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್‌ ಸೂಚಿಸಿತ್ತು.

14 ಎಕರೆ ಜಮೀನಿನ ಮಾಲೀಕತ್ವದ ಕುರಿತಂತೆ ವಿಚಾರಣೆ ನಡೆಸಲು ಐಎಎಸ್‌ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿತ್ತು. ಎಸ್‌ಐಟಿ ರಚನೆ ಮತ್ತು ತಹಶೀಲ್ದಾರ್ ಹೊರಡಿಸಿದ ನೋಟಿಸ್‌ಗೆ ಹೈಕೋರ್ಟ್‌ ಏಕಸದಸ್ಯ ಪೀಠ ತಡೆ ನೀಡಿತ್ತು.

HD Kumaraswamy
ಕಾಡುಗೋಡಿ ಒತ್ತುವರಿ ತೆರವು: ದಲಿತರನ್ನಷ್ಟೇ ಹೊರಹಾಕಿದ್ದಾರೆ; ಛಲವಾದಿ ನಾರಾಯಣಸ್ವಾಮಿ ಆರೋಪ

ಭೂ ಒತ್ತುವರಿ ಆರೋಪ ಸಂಬಂಧ ತನಿಖೆಗೆ ಸರಕಾರ ಎಸ್‌ಐಟಿ ರಚಿಸಿತ್ತು. ತಹಶೀಲ್ದಾರ್‌ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದ ಸರಕಾರದ ಕ್ರಮವನ್ನು ಹೈಕೋರ್ಟ್‌ ಏಕಸದಸ್ಯ ಪೀಠ ತಡೆ ಹಿಡಿದಿತ್ತು. ಸರಕಾರದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಸೆ.8 ರಂದು ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿ, ತನಿಖೆ ಮುಂದುವರಿಸಲು ಸೂಚಿಸಿತ್ತು. ಕೇಂದ್ರ ಸಚಿವ ಕುಮಾರಸ್ವಾಮಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com