
ಬೆಳಗಾವಿ: ದ್ವೇಷಭಾಷಣದ ಆರೋಪದ ಮೇಲೆ ತುಮಕೂರು ನಗರ ಠಾಣೆ ಪೊಲೀಸರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶನಿವಾರ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಭಾನುವಾರ ರಾತ್ರಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ರಘುನಾಥ್ ಕೊಟ್ಟ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಮದ್ದೂರಿನಲ್ಲಿ ನನ್ನ ವಿರುದ್ಧ 70ನೇ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ 71ನೇ ಪ್ರಕರಣ ದಾಖಲಾಗಬಹುದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ 71ನೇ ಪ್ರಕರಣ ದಾಖಲಾಗಿದೆ.
Advertisement