ಬೆಂಗಳೂರು: ಟ್ರಾಫಿಕ್‌ ಫೈನ್‌ ಪಾವತಿಗೆ ಶೇ.50ರಷ್ಟು ರಿಯಾಯಿತಿ; 144 ಕೋಟಿಗೂ ಅಧಿಕ ದಂಡ ಸಂಗ್ರಹ, 53.11ಲಕ್ಷ ಪ್ರಕರಣ ಇತ್ಯರ್ಥ

ಟ್ರಾಫಿಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳನ್ನೂ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ನಿಗದಿಪಡಿಸಲಾಗಿತ್ತು. ಅದರಂತೆ, 53,11,589 ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳಾಗಿ ವಿಲೇವಾರಿ ಮಾಡಲಾಗಿದ್ದು, 144 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ದಂಡ ಸಂಗ್ರಹಿಸಲಾಗಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ 144 ಕೋಟಿಗೂ ಅಧಿಕ ದಂಡ ಸಂಗ್ರಹಿಸಲಾಗಿದೆ.

ಕೆಎಸ್‌ಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್‌ ಅವರು ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳು ಹಾಗೂ ಪರಿಹಾರದ ಅಂಕಿ-ಅಂಶಗಳ ಕುರಿತು ಮಾಹಿತಿ ನೀಡಿದರು.

ರಾಜ್ಯಾಧ್ಯಂತ ಸೆಪ್ಟೆಂಬರ್ 13ರಂದು ನಡೆದ ಲೋಕ ಅದಾಲತ್​ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿರುವ 2,31,251 ಮತ್ತು ವ್ಯಾಜ್ಯ ಪೂರ್ವ 1,08,63,667 ಪ್ರಕರಣಗಳು ಸೇರಿ ಒಟ್ಟು 1,11,04,918 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಹೇಳಿದರು.

ಲೋಕ ಅದಾಲತ್‌ಗಾಗಿ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರ್ಗಿಯ ಪೀಠಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳೂ ಸೇರಿ ಒಟ್ಟು 989 ಪೀಠಗಳನ್ನು ಸ್ಥಾಪಿಸಲಾಗಿತ್ತು. ಹೈಕೋರ್ಟ್‌ನ ಮೂರೂ ಪೀಠಗಳಲ್ಲಿ ಬಾಕಿ ಇದ್ದ ಒಟ್ಟು 1,042 ಪ್ರಕರಣಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿದ್ದ 2,41,251 ಪ್ರಕರಣಗಳು ಸೇರಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಒಟ್ಟು 2,42,293 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೆ, 1,08,63,667 ವ್ಯಾಜ್ಯಪೂರ್ವ ಪ್ರಕರಣಗಳನ್ನೂ ಅದಾಲತ್‌ನಲ್ಲಿ ವಿಲೇವಾರಿ ಮಾಡಲಾಗಿದ್ದು, ಒಟ್ಟಾರೆ 1,11,05,960 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಟ್ರಾಫಿಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳನ್ನೂ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ನಿಗದಿಪಡಿಸಲಾಗಿತ್ತು. ಅದರಂತೆ, 53,11,589 ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳಾಗಿ ವಿಲೇವಾರಿ ಮಾಡಲಾಗಿದ್ದು, 144 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ದಂಡ ಸಂಗ್ರಹಿಸಲಾಗಿದೆ. ಈ ರೀತಿಯ ಟ್ರಾಫಿಕ್ ಚಲನ್ ಪ್ರಕರಣಗಳ ಇತ್ಯರ್ಥವು ಪ್ರಾಧಿಕಾರದ ಐತಿಹಾಸಿಕ ಸಾಧನೆಯಾಗಿದೆ. ಇದರಿಂದ, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ದಾಖಲೆ ಮೊತ್ತದ ಆದಾಯ ಸಂದಾಯವಾಗುವ ಜತೆಗೆ, ಸಾರ್ವಜನಿಕರಲ್ಲಿ ಸಂಚಾರ ಜಾಗೃತಿಯನ್ನೂ ಸೃಷ್ಟಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

File photo
ಲೋಕ ಅದಾಲತ್: ಒಂದೇ ದಿನ ದಾಖಲೆಯ 35 ಲಕ್ಷ ಪ್ರಕರಣಗಳು ಇತ್ಯರ್ಥ; ಪ್ರತಿಷ್ಠೆ ಮರೆತು ಮತ್ತೆ ಒಂದಾದ 248 ಜೋಡಿಗಳು!

ಸಿಆರ್‌ಪಿಸಿಯ ಸೆಕ್ಷನ್ 125 ಮತ್ತು ಕೌಟುಂಬಿಕ ಹಿಂಸಾಚಾರ ಕಾಯ್ದೆಯ ಅಡಿಯಲ್ಲಿನ ಪ್ರಕರಣಗಳು ಸೇರಿದಂತೆ ಒಟ್ಟು 1,446 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಒಟ್ಟು 2,876 ವಿಭಜನಾ ಮೊಕದ್ದಮೆಗಳನ್ನು ಇತ್ಯರ್ಥಪಡಿಸಲಾಗಿದೆ. 1,499 ಪ್ರಕರಣಗಳಲ್ಲಿ, ಹಿರಿಯ ನಾಗರಿಕರು ತಮ್ಮ ವಿವಾದಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಂಡಿದ್ದಾರೆ. 304 ದಂಪತಿಗಳು ಮತ್ತೆ ಒಂದಾಗಿದ್ದಾರೆ.

5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಬಾಕಿ ಉಳಿದಿರುವ 1,460 ಪ್ರಕರಣಗಳು, 10 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಬಾಕಿ ಇರುವ 198 ಪ್ರಕರಣಗಳು ಮತ್ತು 15 ವರ್ಷಗಳಿಗೂ ಹೆಚ್ಚು ಕಾಲ ಬಾಕಿ ಇರುವ 22 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

3,708 ಮೋಟಾರು ವಾಹನ ಅಪಘಾತ ಪ್ರಕರಣಗಳನ್ನು 265 ಕೋಟಿ ರೂ.ಗಳಿಗೆ ಮತ್ತು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಕಾಯ್ದೆಯಡಿ 10,273 ಪ್ರಕರಣಗಳನ್ನು 1,863 ಕೋಟಿ ರೂ.ಗಳಿಗೆ ಇತ್ಯರ್ಥಪಡಿಸಲಾಗಿದೆ.

21 ರೇರಾ ಪ್ರಕರಣಗಳನ್ನು 2.63 ಕೋಟಿ ರೂ.ಗಳ ಇತ್ಯರ್ಥ ಮೊತ್ತದೊಂದಿಗೆ ವಿಲೇವಾರಿ ಮಾಡಲಾಗಿದೆ. 185 ಗ್ರಾಹಕ ಪ್ರಕರಣಗಳನ್ನು 4 ಕೋಟಿ ರೂ.ಗಳ ಮೊತ್ತದೊಂದಿಗೆ ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com