ಹೊಸದಾಗಿ 18,500 ಶಿಕ್ಷಕರ ಹುದ್ದೆ ನೇಮಕಾತಿಗೆ ಕ್ರಮ: ಮಧು ಬಂಗಾರಪ್ಪ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು.
Madhu Bangarappa
ಸಚಿವ ಮಧು ಬಂಗಾರಪ್ಪ
Updated on

ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು.

ಶಾಲಾ ಕೊಠಡಿಗಳ ಶಿಥಿಲಾವಸ್ಥೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಕೇವಲ ನಮ್ಮ ಸರಕಾರದ ಅವಧಿಯಲ್ಲಿ ಸೃಷ್ಟಿಯಾದ ಸಮಸ್ಯೆಯಲ್ಲ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಎಲ್ಲಾ ಶಾಲೆಗಳಲ್ಲೂ ಸಮಸ್ಯೆಗಳಿಲ್ಲ ಎಂದು ಹೇಳುತ್ತಿಲ್ಲ. ಈ ಹಿಂದಿನ ಸರಕಾರ ಯಾವುದೇ ಕೊಠಡಿಯನ್ನು ಕಟ್ಟಿಲ್ಲ. ನೇಮಕ ಕೂಡ ಮಾಡಿಲ್ಲ. ನಾವೂ ಅಧಿಕಾರಕ್ಕೆ ಬಂದ ಮೇಲೆ ವಿವೇಕ ಯೋಜನೆಯಡಿ 8,200 ಕೊಠಡಿ ಪೂರ್ಣ ಮಾಡಿದ್ದೇವೆ. ಮತ್ತೆ 3000 ಸಾವಿರ ಕೊಠಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಧಾರ್ಮಿಕ ಕ್ಷೇತ್ರದ ಬಗ್ಗೆ ಶಿಳ್ಳೆ ಹೊಡೆಯುವುದೇ ಸಿ ಟಿ ರವಿ ಅವರ ಅಭ್ಯಾಸವಾಗಿದೆ. ಇದು ಕೆಟ್ಟ ಗುಣ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ಮೈ-ಮನಗಳಲ್ಲಿ ಇದ್ದರೆ ಮಾತ್ರ ಇಂತಹ ವ್ಯವಸ್ಥೆ ಕಡಿಮೆಯಾಗುತ್ತದೆ ಎಂದರು.

Madhu Bangarappa
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ವಿಶೇಷ ಶಾಲೆ ಸ್ಥಾಪನೆ: ಇದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನಸಿನ ಕೂಸು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com