A still frome Jolly LLB 3 movie.
ಜಾಲಿ ಎಲ್.ಎಲ್.ಬಿ. 3 ಚಿತ್ರದ ಸ್ಟಿಲ್

Jolly LLB 3: ಚಿತ್ರ ಬಿಡುಗಡೆ ತಡೆ ಕೋರಿ ಸಲ್ಲಿಸಿದ್ದ ಆರ್ಜಿ ತಿರಸ್ಕೃತ, 50,000 ರೂ ದಂಡಕ್ಕೆ ಹೈಕೋರ್ಟ್ ಆದೇಶ

ಇಂತಹ ಅರ್ಜಿಗಳು ನ್ಯಾಯಾಂಗದ ಸಮಯ ಪೋಲು ಮಾಡಲಿದ್ದು, ಅದಕ್ಕಾಗಿಯೇ ಅರ್ಜಿ ಸಲ್ಲಿಕೆ ಮಾಡಿದಂತಿದೆ. ಹೀಗಾಗಿ, ಅರ್ಜಿ ವಜಾಗೊಳಿಸುತ್ತಿದ್ದು, ಅರ್ಜಿದಾರೆಗೆ 50,000 ದಂಡ ವಿಧಿಸಲಾಗಿದೆ.
Published on

ಬೆಂಗಳೂರು: ‘ಜಾಲಿ ಎಲ್.ಎಲ್.ಬಿ. 3’ ಚಿತ್ರದ ಬಿಡುಗಡೆ ಮತ್ತು ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದ್ದು, ಅರ್ಜಿದಾರನಿಗೆ 50,000 ರೂ. ದಂಡ ವಿಧಿಸಿದೆ.

ಬೆಂಗಳೂರಿನ ಸಯೀದಾ ನಿಲೋಫರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ.

‘ಜಾಲಿ ಎಲ್.ಎಲ್.ಬಿ. 3’ ಚಿತ್ರದಲ್ಲಿರುವ ಸಂಭಾಷಣೆ ಮತ್ತು ದೃಶ್ಯಗಳು ಭಾರತೀಯ ನ್ಯಾಯ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಉಲ್ಲಂಘನೆ ಮಾಡಿದಂತಿದೆ. ಹೀಗಾಗಿ ಚಿತ್ರದ ನಟರು, ನಿರ್ಮಾಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಿಸಿದ ಪ್ರಾಧಿಕಾರಕ್ಕೆ ಸೂಚಿಸಬೇಕು. ಚಿತ್ರದ ನಿರ್ಮಾಪಕರ ಮತ್ತು ನಟರು ರಾಷ್ಟ್ರೀಯ ಪತ್ರಿಕೆಗಳಲ್ಲಿ ಕ್ಷಮೆಯಾಚಿಸಲು ನಿರ್ದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು.

ಈ ಮನವಿ ಪುರಸ್ಕರಿಸಲು ವಿಭಾಗೀಯ ಪೀಠ ನಿರಾಕರಿಸಿದ್ದು, ಚಿತ್ರದಲ್ಲಿರುವ ನ್ಯಾಯಾಲಯದ ದೃಶ್ಯಗಳು ಹಾಸ್ಯ ಪ್ರಜ್ಞೆ ಮೂಲಕ ಪ್ರೇಕ್ಷಕರನ್ನು ಆಕರ್ಷಿಸುವ ಉದ್ದೇಶದಿಂದ ಕೂಡಿದೆ ಎಂದು ತೋರುತ್ತದೆ. ಈ ಹಾಸ್ಯ ಪ್ರಜ್ಞೆ ಅರ್ಜಿದಾರರನ್ನು ಆಕರ್ಷಿಸಿಲ್ಲ. ಹೀಗಾಗಿ ಸೃಜನಶೀಲತೆಯನ್ನು ಹತ್ತಿಕ್ಕುವುದು ಮತ್ತು ದೃಶ್ಯಗಳನ್ನು ಸೆನ್ಸಾರ್ ಮಾಡುವಂತೆ ಆದೇಶಿಸಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇಂತಹ ಅರ್ಜಿಗಳು ನ್ಯಾಯಾಂಗದ ಸಮಯ ಪೋಲು ಮಾಡಲಿದ್ದು, ಅದಕ್ಕಾಗಿಯೇ ಅರ್ಜಿ ಸಲ್ಲಿಕೆ ಮಾಡಿದಂತಿದೆ. ಹೀಗಾಗಿ, ಅರ್ಜಿ ವಜಾಗೊಳಿಸುತ್ತಿದ್ದು, ಅರ್ಜಿದಾರೆಗೆ 50,000 ದಂಡ ವಿಧಿಸಲಾಗಿದೆ. ಇದನ್ನು ಅವರು ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಠೇವಣಿ ಇಡಬೇಕು. ಠೇವಣಿ ಇಡದಿದ್ದಲ್ಲಿ ಕಠಿಣ ಕ್ರಮಕ್ಕಾಗಿ ಅರ್ಜಿಯನ್ನು ಅಕ್ಟೋಬರ್‌ 4ರಂದು ಮತ್ತೆ ವಿಚಾರಣೆಗೆ ಪಟ್ಟಿ ಮಾಡಬೇಕು ಎಂದು ನಿರ್ದೇಶಿಸಿದೆ.

A still frome Jolly LLB 3 movie.
Jolly LLB 3: ವಿಚಾರಣೆಗೆ ಖುದ್ದು ಹಾಜರಾಗುವಂತೆ Akshay Kumar, Arshad Warsi ಗೆ ಪುಣೆ ಕೋರ್ಟ್ ಸಮನ್ಸ್!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com