ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರು ಲೆಕ್ಚರರ್‌ಗಳ ವಿರುದ್ಧ FIR

ಅತಿಥಿ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ವಿವಿಯ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ.​
Bengaluru university guest lecturer alleges sexual harassment by five lecturers; FIR filed
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿವಿಯ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅತಿಥಿ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ವಿವಿಯ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ.​

ಈ ಐವರು ಆರೋಪಿ ಉಪನ್ಯಾಸಕರು ವಿವಿಧ ಸಂದರ್ಭಗಳಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಜ್ಞಾನಭಾರತಿ ಆವರಣದಲ್ಲೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Bengaluru university guest lecturer alleges sexual harassment by five lecturers; FIR filed
ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ಹಲ್ಲೆ; ಗಿಗ್ ಕಾರ್ಮಿಕನ ಬಂಧನ

ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕುಡಿದು ಬೇಕಾಬಿಟ್ಟಿ ವರ್ತಿಸಿದ, ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ.

ಅತಿಥಿ ಉಪನ್ಯಾಸಕ ರಾಮಾಂಜನೇಯ ಮದ್ಯ ಸೇವಿಸಿ ಬೆಂಗಳೂರು ವಿವಿ ಆವರಣದಲ್ಲಿ ಶರ್ಟ್ ಬಿಚ್ಚಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿಯನ್ನ ಎತ್ತಿಕೊಂಡು ಡ್ಯಾನ್ಸ್ ಮಾಡಿರುವುದು ಮತ್ತು ಕಾರಿನಲ್ಲಿ ಕುಳಿತು ಮದ್ಯ ಸೇವಿಸಿರುವ ವಿಡಿಯೋಗಳು ವೈರಲ್ ಆಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com