Deepika Student Scholarship: ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗ; ಈ ಬಾರಿ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ!

ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದರು.
CM Siddaramaiah with Azim Premji
ಅಜೀಂ ಪ್ರೇಮ್‌ಜಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಅಜೀಂ ಪ್ರೇಂಜಿ ಫೌಂಡೇಶನ್ ಸಹಯೋಗದಲ್ಲಿ ಈ ಬಾರಿ 37,000 ವಿದ್ಯಾರ್ಥಿನಿಯರಿಗೆ 'ದೀಪಿಕಾ' ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

“ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದರು.

ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಅಭಿನಂದನೆ ಸಲ್ಲಿಸಿದರು.

ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕ್ಸೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ. ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ. ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು ಎಂದರು.

ಮಹಾತ್ಮಾ ಗಾಂಧೀಜಿಯವರು ‘ನೀವು ಗಳಿಸಿದ ಸಂಪತ್ತು ಸಮಾಜದ ಒಳಿತಿಗೆ ಬಳಕೆಯಾಗಬೇಕು’ ಎಂದಂತೆ ಅಜೀಂಪ್ರೇಂ ಜೀ ಅವರು ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಂತಸ ವ್ಯಕ್ತಪಡಿಸಿದರು.

CM Siddaramaiah with Azim Premji
ಬಳ್ಳಾರಿ: 15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮನೆ ಬಾಗಿಲಿಗೆ CM ಸಿದ್ದರಾಮಯ್ಯ ಭಾವಚಿತ್ರ ಕೆತ್ತಿಸಿದ ದಂಪತಿ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com