SSLC ಮತ್ತು ದ್ವಿತೀಯ PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.
Tentative timetable for SSLC and 2nd PUC out
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ದ್ವಿತೀಯ ಪಿಯುಸಿ ಪರೀಕ್ಷೆ – 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2026ರ ಏಪ್ರಿಲ್ 25 ರಂದು ಪರೀಕ್ಷೆ ಶುರುವಾಗಿ, ಮೇ 9 ರಂದು ಕೊನೆಗೊಳ್ಳಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ SSLC ಪರೀಕ್ಷೆ 2026ರ ಮಾರ್ಚ್ 18 ರಂದು ಆರಂಭವಾಗಿ ಏಪ್ರಿಲ್ 1 ರಂದು ಕೊನೆಗೊಳ್ಳಲಿದೆ.

Tentative timetable for SSLC and 2nd PUC out
SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಮುಂದು: 29 ಅಂಶಗಳ ಮಾರ್ಗಸೂಚಿ ಪ್ರಕಟ; ಡಿಸೆಂಬರೊಳಗೆ ಪಠ್ಯಬೋಧನೆ ಪೂರ್ಣಗೊಳಿಸುವಂತೆ ಸೂಚನೆ

ಎಸ್​ಎಸ್​ಎಲ್​ಸಿ ಪರೀಕ್ಷೆ–2ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೇ 18ರಂದು ಪರೀಕ್ಷೆ ಆರಂಭವಾಗಿ ಮೇ 25 ರಂದು ಕೊನೆಗೊಳ್ಳಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣ www.kseab.karnataka.gov.in ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 9 ರ ವರೆಗೆ ಕಾಲಾವಕಾಶವನ್ನು ನೀಡಿದೆ. ಅಕ್ಷೇಪಣೆಗಳನ್ನು ಇ-ಮೇಲ್‌ ಮೂಲಕ chairpersonkseeb@gmail.com ಗೆ ಸಲ್ಲಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com