ಕರಾವಳಿ ಜಾನಪದ ಕ್ರೀಡೆ 'ಕಂಬಳ': ರಾಜ್ಯ ಕ್ರೀಡೆ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ

ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.
Kambala sports
ಕಂಬಳ ಕ್ರೀಡೆ
Updated on: 

ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ(Kambala) ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.

ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ.

ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.

Kambala sports
ಕಂಬಳ ನಮ್ಮ ಕ್ರೀಡೆ, ಅಗತ್ಯ ಬಿದ್ದರೆ ಕಾನೂನು ರಚನೆಗೂ ಸಿದ್ಧ: ಸಿಎಂ ಸಿದ್ದರಾಮಯ್ಯ

ಸಮಿತಿಯ ಅಧ್ಯಕ್ಷರೇ ಕಂಬಳ ಅಸೋಸಿಯೇಷನ್ ಗೆ ಅಧ್ಯಕ್ಷರಾಗಿದ್ದಾರೆ. ಕಂಬಳ ಕೋಣದ ಮಾಲೀಕರು, ಓಟಗಾರರು ಇತರರಿಗೆ, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ ಸೌಲಭ್ಯ ಸಿಗಲಿವೆ. ಈ ಬಗ್ಗೆ ಬೈಲಾ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com