
ಹಾಸನ: ದೇವಾಲಯದ ಬಾಗಿಲು ತೆರೆದು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆಯೊಂದು ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ.
ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಈ ಘಟನೆ ನಡೆದಿದೆ.
ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಕಿಡಿಗೇಡಿಗ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
ಕೋಮು ಸೌಹಾರ್ದ ಕದಡಲು ಕೆಲವು ಕಿಡಿಗೇಡಿಗಳು ಇಂತಹ ದುಷ್ಕೃತ್ಯ ಎಸಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
1986 ಇಸವಿಯಲ್ಲಿ ಈ ಗಣೇಶ ಪ್ರತಿಷ್ಠಾಪನೆಯಾಗಿತ್ತು. ಇಲ್ಲಿರುವ ಸುತ್ತಮುತ್ತಲಿನ ಜನರು ವ್ಯಾಪಾರ ಉತ್ತಮವಾಗುತ್ತೆ ಎಂಬ ನಂಬಿಕೆಯಲ್ಲಿ ಮುಂಜಾನೆ ಪೂಜೆ ಮಾಡಿಕೊಂಡು ಹೋಗುತ್ತಾರೆ. ಮುಂಜಾನೆ ಎದ್ದ ನಿತ್ಯಕರ್ಮ ಮುಗಿಸಿ ದೇವರ ಮುಖ ನೋಡೋದೆ ಈ ಜನರ ವಾಡಿಕೆ. ಮೂವತ್ತು ನಲವತ್ತೈದು ವರ್ಷದಿಂದ ಇದೆ.
ಇದು ಶ್ರೇಷ್ಠವಾದದ್ದು,ಅಂತಹ ವರಸಿದ್ಧಿ ನಾಯಕನಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಬಾಗಿಲು ಹಾಕಿದ್ದರೂ ಸಹ ಓಪನ್ ಮಾಡಿ ಯಾವ ಸಮಯದಲ್ಲಿ ಹಾಕಿದ್ದಾರೋ ಗೊತ್ತಿಲ್ಲ. ಆದ್ರೆ ಚಪ್ಪಲಿ ಹಾಕಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ದೇವಸ್ಥಾನಕ್ಕೆ ಮುಖ ಮುಚ್ಚಿಕೊಂಡ ಮಹಿಳೆಯೊಬ್ಬರು ಗಣೇಶನ ದೇವಸ್ಥಾನಕ್ಕೆ ಬಂದಿದ್ದುಸ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.
ಸಾರ್ವಜನಿಕರು ಮಹಿಳೆಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಬೇಲೂರು ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆಗಾಗಿ ಬೇಲೂರು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಕ್ರಮಕ್ಕೆ ಯತ್ನಾಳ್ ಆಗ್ರಹ
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಹೃದಯಭಾಗವಾದ ಪುರಸಭೆ ಆವರಣದಲ್ಲಿ ಸ್ಥಾಪಿತವಾದ ಶ್ರೀ ವರಸಿದ್ಧಿ ವಿನಾಯಕ ದೇವಾಲಯವು ಗಣೇಶ ಭಕ್ತರಿಗೆ ಪ್ರಸಿದ್ಧ ಸ್ಥಳವಾಗಿದ್ದು, ಈ ದೇವಸ್ಥಾನದಲ್ಲಿರುವ ಗಣೇಶ ಮೂರ್ತಿಯ ಗಣೇಶನ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಮತಾಂಧರು ವಿಕೃತಿ ಮೆರೆದಿರುವುದು ನಿಜಕ್ಕೂ ಹೇಯ ಹಾಗೂ ಖಂಡನೀಯ ಎಂದು ಹೇಳಿದ್ದಾರೆ.
ಮದ್ದೂರಿನ ಘಟನೆ ಮಾಸುವ ಮುನ್ನವೇ ಸಮಾಜಘಾತುಕ ಶಕ್ತಿಗಳು ಹಿಂದೂ ದೇವರ ಮೂರ್ತಿಗಳನ್ನು ಭಿನ್ನ ಮಾಡುವ ದುಷ್ಕೃತ್ಯವೆಸಗಿರುವುದು ಹಾಗೂ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿರುವುದು ಕ್ಷಮಿಸಲಾಗದ ದುಷ್ಕೃತ್ಯವಾಗಿದೆ. ಸರ್ಕಾರ ಕೂಡಲೇ ಈ ಕಿಡಿಗೇಡಿಗಳನ್ನು ಬಂಧಿಸಿ, ಜಾಮೀನು ರಹಿತ ಪ್ರಕರಣವನ್ನು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
Advertisement