
ಬೆಂಗಳೂರು: ಹಲವು, ಗೊಂದಲ, ವಿರೋಧಗಳ ನಡುವೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಇಂದಿನಿಂದ ಜಾತಿ ಸಮೀಕ್ಷೆ ಆರಂಭವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ, ಧರ್ಮದ ಕಾಲಂನಲ್ಲಿ ನಾಸ್ತಿಕ ಎಂದು ಬರೆಸುವೆ ಎಂದು ಹೇಳಿಕೊಂಡಿದ್ದಾರೆ.
ದೇವರು- ದಿಂಡಿರು, ಸ್ವರ್ಗ-ನರಕ, ಆ ಲೋಕ, ಈ ಲೋಕ, ಆ ಜನ್ಮ, ಈ ಜನ್ಮ, ಈ ವೈಗ್ಯೆರೆಗಳಲ್ಲಿ ನಂಬಿಕೆ ಇರದವನು ನಾನು ಎಂದು ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕುಂ.ವೀ. ಎಂದೇ ಜನಪ್ರಿಯರಾಗಿರುವ ಕಾದಂಬರಿಕಾರ, ಕತೆಗಾರ ಕುಂ. ವೀರಭದ್ರಪ್ಪ ಅವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನಲ್ಲಿ ವಾಸಿಸುತ್ತಿದ್ದಾರೆ.
ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಗುರಿಯೊಂದಿಗೆ ಇಂದಿನಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಸಮೀಕ್ಷೆ ಕಾರ್ಯವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ವಿಳಂಬವಾಗಿ ಸಮೀಕ್ಷೆ ಆರಂಭವಾಗುತ್ತಿದೆ.
Advertisement