ದಸರಾ ಉದ್ಘಾಟನೆಗೆ ಮುನ್ನ ಚಾಮುಂಡಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಭಾಗಿ

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು.
Falicitation in front of Mysuru Chamundeshwari temple
ಚಾಮುಂಡೇಶ್ವರಿ ಸನ್ನಿಧಿ ಮುಂದೆ ಸನ್ಮಾನ
Updated on

ಮೈಸೂರು: ನಾಡ ಅಧಿದೇವತೆ ಮೈಸೂರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ದಸರಾ ಉದ್ಘಾಟನೆ ಅತಿಥಿ ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮೈಸೂರಿನ ಶಾಸಕರು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಹಾಜರಿದ್ದರು.

ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್‌ ದೇವಸ್ಥಾನಕ್ಕೆ ಆಗಮಿಸಿದರು. ಗರ್ಭಗುಡಿ ಮುಂಭಾಗದ ಆವರಣದಲ್ಲಿ ನಿಂತು ತಾಯಿ ಚಾಮುಂಡಿ ದರ್ಶನ ಪಡೆದರು. ನಂತರ ಗಣಪತಿಗೆ ಕೈ ಮುಗಿದು, ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದರು.

Falicitation in front of Mysuru Chamundeshwari temple
ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ: ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ- ಬಾನು ಮುಷ್ತಾಕ್‌ ಗೆ ಬಿಗಿ ಭದ್ರತೆ

ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಇಡೀ ಕುಟುಂಬವೇ ಹಾಜರಾಗಿದೆ. ಖಾಸಗಿ ಹೋಟೆಲಿನಿಂದ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್‌ ಆಗಮಿಸಿದರೆ ಸಿಎಂ ಮತ್ತು ಸಚಿವರು ಐರಾವತ ಬಸ್ಸಿನಲ್ಲಿ ಆಗಮಿಸಿದರು.

ಜಾನಪತ ಕಲಾತಂಡಗಳು ಗಣ್ಯರನ್ನು ಸ್ವಾಗತ ಮಾಡಿದವು. ನಂತರ ಜಾನಪದ ಕಲಾ ತಂಡಗಳ ಜೊತೆ ಮಹಿಷಾಸುರ ಪ್ರತಿಮೆಯಿಂದ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಚಾಮುಂಡಿ ದೇವಸ್ಥಾನದ ಒಳಗಡೆ ಪ್ರವೇಶಿಸಿ ಪೂಜೆಯಲ್ಲಿ ಭಾಗಿಯಾದರು.

ನಾಡದೇವಿಗೆ ಬಾನು ಮುಷ್ತಾಕ್ ಅವರು ಪೂಜೆ ಸಲ್ಲಿಸಿ ಭಕ್ತಿಯಿಂದ ಭಾಗಿಯಾಗಿ ಮಹಾಮಂಗಳಾರತಿ ಸ್ವೀಕರಿಸಿದರು. ದೇವಿಯ ದರ್ಶನ ಪಡೆದು ಭಾವುಕರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com