
ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.
ಪರಭಾಷಾ ಸಿನಿಮಾಗಳ ಹಾವಳಿ, ಮಿತಿ ಮೀರಿದ ಟಿಕೆಟ್ ದರದ ವಿರುದ್ಧ ಇಡೀ ಇಂಡಸ್ಟ್ರಿ ಏಕರೂಪ ಟಿಕೆಟ್ ದರ ನಿಗದಿ ಮಾಡಬೇಕು ಎಂದು ದಶಕಗಳಿಂದ ಹೋರಾಟ ನಡೆದಿತ್ತು. ಹತ್ತಾರು ಬಾರಿ ಈ ವಿಚಾರವಾಗಿ ಚರ್ಚೆ, ವಾದ- ಪ್ರತಿವಾದಗಳು ನಡೆದಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಏಕರೂಪದ ಟಿಕೆಟ್ ದರ ನಿಗದಿ ಮಾಡುತ್ತು.
200 ರೂಪಾಯಿ ನಿಗದಿ ವಿರುದ್ಧ ವಿರೋಧ ಕೂಡ ವ್ಯಕ್ತವಾಗಿತ್ತು. ಬಿಗ್ ಬಜೆಟ್ ಸಿನಿಮಾಗಳಿಗೆ ಇದರಿಂದ ತೊಂದರೆ ಆಗಲಿದೆ ಎಂಬ ಚರ್ಚೆ ಶುರುವಾಯ್ತು. ಕೊನೆಗೆ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಆಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ನ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.
Advertisement