ಬೆಳಗಾವಿ: 'ಅಕ್ರಮವಾಗಿ' ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಸ್ಥಳೀಯರು, ಮೂವರ ಬಂಧನ

ಬೆಳಗಾವಿ ಅಗ್ನಿಶಾಮಕ ಇಲಾಖೆ ಮತ್ತು ಉಗಾರ ಸಕ್ಕರೆ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ಹೊತ್ತಿಗೆ, ವಾಹನವು ಸಂಪೂರ್ಣವಾಗಿ ಸುಟ್ಟು ಹೋಗಿತ್ತು.
Mob in Belagavi torches vehicle transporting beef 'illegally'
ಗೋಮಾಂಸ ಸಾಗಣೆ ಮಾಡುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಸ್ಥಳೀಯರು.
Updated on

ಬೆಳಗಾವಿ: ನೆರೆಯ ತೆಲಂಗಾಣಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ರಾತ್ರಿ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ಬಾಗ್ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಟ್ರಕ್ ಅನ್ನು ಕಾಗವಾಡ ತಾಲ್ಲೂಕಿನ ಸಿದ್ದೇಶ್ವರ ದೇವಸ್ಥಾನದ ಬಳಿ ತಡೆದು ನಿಲ್ಲಿಸಲಾಗಿದೆ.

ಸ್ಥಳೀಯರು ಪರಿಶೀಲನೆ ನಡೆಸಿದಾಗ, ವಾಹನದೊಳಗೆ ಗೋಮಾಂಸ ಇರುವುದು ಪತ್ತೆಯಾಗಿದೆ. ಇದರಿಂದ ಕೋಪಗೊಂಡ ಅವರು ಟ್ರಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ ಅಗ್ನಿಶಾಮಕ ಇಲಾಖೆ ಮತ್ತು ಉಗಾರ್ ಸಕ್ಕರೆ ಕಾರ್ಖಾನೆಯ ಅಗ್ನಿಶಾಮಕ ದಳದವರು ಬರುವ ಹೊತ್ತಿಗೆ, ವಾಹನವು ಸಂಪೂರ್ಣವಾಗಿ ಸುಟ್ಟುಹೋಗಿತ್ತು.

ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಮತ್ತು ದರೋಡೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಅಡಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದಲ್ಲದೆ, ಮಾಂಸವನ್ನು ಅಕ್ರಮವಾಗಿ ಸಾಗಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com