
ಬೆಂಗಳೂರು: ಒಂದೆಡೆ ಕೇಂದ್ರ ಸರ್ಕಾರ GST ಸ್ಲ್ಯಾಬ್ ಗಳನ್ನು ಇಳಿಕೆ ಮಾಡುವ ಮೂಲಕ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಿದ್ದರೆ, ರಾಜ್ಯ ಸರ್ಕಾರ ಮತ್ತೊಂದು ಸುತ್ತಿನ ಬೆಲೆ ಏರಿಕೆ ಶಾಕ್ ಕೊಡಲು ಸಿದ್ಧತೆ ನಡೆಸಿದೆ.
ದೇಸಿ ಹಾಲಿನ ಪ್ಯಾಕೆಟ್ ದರ ಏರಿಕೆ ಆಗಿರುವುದರ ನಡುವೆ ಈಗ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಬಂದಿದೆ. ವಿದ್ಯುತ್ ದರ ಏರಿಕೆಯ ಮಾದರಿಯಲ್ಲೇ ಇನ್ನು ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಸಾರಿಗೆ ಸಂಸ್ಥೆಗಳ ದರ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ.
ಸಾರಿಗೆ ದರ ನಿಯಂತ್ರಣ ಸಮಿತಿ
KERC ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1989ರ ಅಡಿಯಲ್ಲಿ ದರ ನಿಯಂತ್ರಣ ಸಮಿತಿಯನ್ನ ರಾಜ್ಯ ಸರ್ಕಾರ ರಚನೆ ಮಾಡಿದೆ. ಈ ಸಮಿತಿ ಪ್ರತಿ ವರ್ಷ ರಸ್ತೆ ಸಾರಿಗೆ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಿದೆ.
ಕಾಲಕಾಲಕ್ಕೆ ದರ ಪರಿಷ್ಕರಣೆ
ಈ ಸಮಿತಿ ಅಧ್ಯಕ್ಷರು ಹಾಗೂ ಇನ್ನಿಬ್ಬರು ಸದಸ್ಯರನ್ನು ಒಳಗೊಂಡಿದ್ದು. ಕಾಲಕಾಲಕ್ಕೆ ದರ ಪರಿಷ್ಕರಣೆ ಮಾಡಲಿದೆ. ಇಂಧನ ದರ ಹೆಚ್ಚುತ್ತಿರುವ ಹಿನ್ನೆಲೆ ದೀರ್ಘಾವಧಿಯಲ್ಲಿ ಒಂದೇ ಬಾರಿ ಪ್ರಯಾಣ ದರ ಏರಿಕೆ ಬದಲು ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವುದು ಸಮಿತಿ ರಚನೆಯ ಹಿಂದಿನ ಉದ್ದೇಶವಾಗಿದೆ.
Advertisement