ಮೈಸೂರು: ಇಂದು ಮಹಿಷಾ ದಸರಾ ಆಚರಣೆ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
Mahishasura
ಮಹಿಷಾಸುರ ಪ್ರತಿಮೆ
Updated on

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿಹತ್ತು ಹಲವು ಆಕರ್ಷಣೆಗಳು ಜನರನ್ನ ಕೈಬೀಸಿ ಕರೆಯುತ್ತಿವೆ.

Mahishasura
'ಮೂಗಿಗಿಂತ ಮೂಗುತಿಯೇ ಭಾರ': ದಸರಾ ಉಪಸಮಿತಿಗಳಿಗೆ ಸರ್ಕಾರ 2219 ಸದಸ್ಯರ ನೇಮಕ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com