ರಾಯಚೂರು: ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಅಪಘಾತ; ಹೊಲಕ್ಕೆ ಉರುಳಿದ KSRTC ಬಸ್- ಹಲವರಿಗೆ ಗಾಯ

ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ
bus overturned
ಹೊಲಕ್ಕೆ ಉರುಳಿದ ಬಸ್
Updated on

ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 16 ಜನರಿದ್ದರು.

ಬಸ್ ಪಲ್ಟಿಯಿಂದ ಬಸ್​ನಲ್ಲಿ ಓರ್ವ ಪ್ರಯಾಣಿಕನ ಕಾಲು ಸಿಲುಕಿ ಒದ್ದಾಡಿದ್ದಾನೆ. ಪೊಲೀಸರು, ಸ್ಥಳೀಯರ ಸಹಾಯದಿಂದ ಪ್ರಯಾಣಿಕನನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.

ಅಲ್ಲದೇ‌ ಬಸ್‌ನಲ್ಲಿದ್ದ ಸುಮಾರು 8 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bus overturned
ಗದಗದಲ್ಲಿ ಭೀಕರ ಅಪಘಾತ: ಇಬ್ಬರು ಪೊಲೀಸ್​ ಕಾನ್ಸ್ಟೇಬಲ್​​​ ಸೇರಿ ಮೂವರು ಸ್ಥಳದಲ್ಲೇ ಸಾವು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com