
ಮಂಡ್ಯ: ಕೆಆರ್ ಎಸ್ ಅಣೆಕಟ್ಟು ಬಳಿ 'ಗಂಗಾರತಿ' ಮಾದರಿಯಲ್ಲಿ ರೂ. 92 ಕೋಟಿ ವೆಚ್ಚದ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ಶುಕ್ರವಾರ ವಿದ್ಯುಕ್ತ ಚಾಲನೆ ದೊರೆತಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು. ಬಳಿಕ ಶಿಲಾ ಫಲಕವನ್ನು ಸಚಿವರು ಅನಾವರಣಗೊಳಿಸಿದರು. ಇದಕ್ಕೂ ಮುನ್ನ ಕಾವೇರಿ ಆರತಿ ಕುರಿತ ಕಿರುಚಿತ್ರ ಪ್ರದರ್ಶಿಸಲಾಯಿತು.
ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚಿನ ವೈದಿಕರ ತಂಡ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ಜಲಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ನಿಶ್ಚಲಾನಂದ ನಾಥ ಸ್ವಾಮೀಜಿ, ಸಚಿವ ಶಿವರಾಜ ತಂಗಡಗಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಐದು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಇದನ್ನು ವೀಕ್ಷಿಸಲು ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ.
Advertisement