ಕಲಬುರಗಿಯಲ್ಲಿ ಕುಂಭದ್ರೋಣ ಮಳೆ ಅಬ್ಬರ: ಹಲವು ಸೇತುವೆ ಜಲಾವೃತ; 2 ದಿನ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಹಿನ್ನೆಲೆ ದಸರಾ ರಜೆ ನಡುವೆಯೂ ಕೆಲವು ಆಡಳಿತ ಮಂಡಳಿಯವರು ಶಾಲೆ ನಡೆಸುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಸದರಿ ಶಾಲೆಗಳಿಗೆ ಸೆಪ್ಟೆಂಬರ್ 27 ಮತ್ತು 28 ರಂದು ರಜೆ ಘೋಷಿಸಿ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.
representational image
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ತಾಲ್ಲೂಕಿನಲ್ಲಿ ಭಾರಿ ಮಳೆಯಿಂದ ಎಲ್ಲೆಡೆ ಪ್ರವಾಹ ಉಂಟಾಗಿದೆ. ಇದರಿಂದ ಹಲವು ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ‌ ಕಡಿದುಕೊಂಡಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಹಿನ್ನೆಲೆ ದಸರಾ ರಜೆ ನಡುವೆಯೂ ಕೆಲವು ಆಡಳಿತ ಮಂಡಳಿಯವರು ಶಾಲೆ ನಡೆಸುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಸದರಿ ಶಾಲೆಗಳಿಗೆ ಸೆಪ್ಟೆಂಬರ್ 27 ಮತ್ತು 28 ರಂದು ರಜೆ ಘೋಷಿಸಿ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ. ಪ್ರಯುಕ್ತ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಶಾಲೆಗಳಿಗೆ ಈಗಾಗಲೇ ದಸರಾ ರಜೆ ಇದ್ದು ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿಯವರು ದಸರಾ ರಜೆಯಿಂದ ವಿನಾಯತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿದ್ದಾರೆ.

ಸದರಿ ಶಾಲೆಗಳಿಗೆ ಮುಂಜಾಗೃತ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ದಿನಾಂಕ: 27-09-2025 ಮತ್ತು 28-09-2025ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶಿಸಿದೆ.

representational image
ರಾಜ್ಯದಲ್ಲಿ ಸೆಪ್ಟೆಂಬರ್ 16 ವರೆಗೆ ಮಳೆ; ಬೆಂಗಳೂರಿಗೆ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ

ಚಂದ್ರಂಪಳ್ಳಿ ಜಲಾಶಯಕ್ಕೆ 7,500 ಕ್ಯೂಸೆಕಗೂ ಅಧಿಕ ಒಳ ಹರಿವಿದ್ದು ಮೂರು ಗೇಟುಗಳನ್ನು ತಲಾ 10 ಅಡಿ ತೆರೆದು ನೀರು ಬಿಡಲಾಗಿದೆ. ಇದರಿಂದ ಚಂದ್ರಂಪಳ್ಳಿ ಕೂಡು ಸೇತುವೆ ಸಂಪೂರ್ಣ ಮುಳುಗಿದೆ. ಗ್ರಾಮ ಸಂಪರ್ಕ‌ ಕಡಿದುಕೊಂಡಿದ್ದು ಗ್ರಾಮಸ್ಥರು ಜಾಗೃತರಾಗಿರಲು ಯೋಜನಾಧಿಕಾರಿ ಚೇತನ ಕಳಸ್ಕರ ಮನವಿ‌ ಮಾಡಿದ್ದಾರೆ.‌

ತಾಲ್ಲೂಕಿನಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಜೋರು‌ ಮಳೆ ಸುರಿಯುತ್ತಿದ್ದು‌ ಕುಂಭ ದ್ರೋಣ ಮಳೆಗೆ ಜನರು ತಲ್ಲಣಗೊಂಡಿದ್ದಾರೆ. ಚಂದಾಪುರ, ಗಾರಂಪಳ್ಳಿ, ಅಣವಾರ, ಕಲ್ಲೂರು, ಕನಕಪುರ ಸೇರಿದಂತೆ ವಿವಿಧೆಡೆ ಮನೆಗಳಿಗೆ‌ ನೀರು ನುಗ್ಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com