ಸಾಕಾಯ್ತು... ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ!

2024ರ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ನಿಂತು ಸೋತಿದ್ದ ದೊಡ್ಮನೆ ಸೊಸೆ ಗೀತಾ ಶಿವರಾಜಕುಮಾರ್ ಇದೀಗ ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
Geetha Shivarajkumar
ಗೀತಾ ಶಿವರಾಜಕುಮಾರ್
Updated on

ಶಿವಮೊಗ್ಗ: 2024ರ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ನಿಂತು ಸೋತಿದ್ದ ದೊಡ್ಮನೆ ಸೊಸೆ ಗೀತಾ ಶಿವರಾಜಕುಮಾರ್ ಇದೀಗ ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ನಾನು ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ. ಆದರೆ ನಿಮ್ಮೆಲ್ಲರ ಜೊತೆ ನಿಲ್ಲುತ್ತೇನೆ. ಮುಂದಿನ ಚುನಾವಣೆಗೆ ಬಂದು ಪ್ರಚಾರ ಮಾಡುತ್ತೇನೆ ಎಂದು ಹೇಳಿದರು. ಮಹಿಳೆಯರು ಯಾರೂ ಅಬಲೆಯೆರಲ್ಲ, ಎಲ್ಲರೂ ಸಬಲೆಯರು. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ಮಾಡುತ್ತಾರೆ. ಇನ್ನು ನಿಮಗೆ ಯಾವುದೇ ಸಮಸ್ಯೆ, ಕಷ್ಟಗಳಿದ್ದರೂ ಸಚಿವ ಮಧು ಬಂಗಾರಪ್ಪ ಅವರನ್ನು ಹಿಡಿದುಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಹೇಳಿದರು.

Geetha Shivarajkumar
AICC ರವಾನಿಸಿದ್ದ ಪಟ್ಟಿ ಮಾರ್ಪಾಡು: 7 ಹೆಸರು ಕೈಬಿಟ್ಟ ಸಿಎಂ ಸಿದ್ದರಾಮಯ್ಯ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com