
ಉಡುಪಿ: ಜಿಲ್ಲೆಯ ಮಲ್ಪೆ ಪ್ರದೇಶದಲ್ಲಿ ಶನಿವಾರ ದುಷ್ಕರ್ಮಿಗಳು ರೌಡಿಶೀಟರ್‌ನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಮಣಿಪಾಲ ನಿವಾಸಿ ಸೈಫುದ್ದೀನ್ (38) ಎಂದು ಗುರುತಿಸಲಾಗಿದ್ದು, ಸಾರಿಗೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮತ್ತು ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯನ್ನು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ವಿವಾದಗಳಲ್ಲಿಯೂ ಅವರು ಸಂಬಂಧ ಹೊಂದಿದ್ದಾರೆಂದು ಮೂಲಗಳು ಸೂಚಿಸಿದ್ದು, ಕೊಲೆಗೆ ನಿಖರವಾದ ಕಾರಣ ಏನೆಂಬುದನ್ನು ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಸೈಫುದ್ದೀನ್ ಅವರ ಕೆಲಸದ ಸ್ಥಳದ ಬಳಿ ಅವರ ಮೇಲೆ ದಾಳಿ ನಡೆಸಲಾಗಿದೆ. ಬೆಳಿಗ್ಗೆ 10.30 ರ ಸುಮಾರಿಗೆ ಅಪರಿಚಿತ ಹಲ್ಲೆಕೋರರ ಗುಂಪು ಅವರ ಮೇಲೆ ಗುಂಡು ಹಾರಿಸಿದೆ.
ಪ್ರತ್ಯಕ್ಷದರ್ಶಿಗಳು ಹೇಳುವಂತೆ ದಾಳಿಕೋರರು ಹಲವಾರು ಬಾರಿ ಗುಂಡು ಹಾರಿಸಿದ್ದಾರೆ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ, ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಹಲವಾರು ತಂಡಗಳನ್ನು ರಚಿಸಲಾಗಿದೆ. ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಹತ್ಯೆಯ ಹಿಂದಿನ ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.
ಈ ಸಂಬಂಧ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದ್ದು, ಪೊಲೀಸರು ಮಲ್ಪೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದಾರೆ ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.
Advertisement