ಧಾರವಾಡ: ಉದ್ಯೋಗಕ್ಕಾಗಿ ಒತ್ತಾಯಿಸಿ ಯುವಕರಿಂದ ಬೃಹತ್ ಪ್ರತಿಭಟನೆ

ನನಗೆ ಈಗ 27 ವರ್ಷ ವಯಸ್ಸಾಗಿದ್ದು, ಕಳೆದ ಎರಡು ವರ್ಷಗಳಿಂದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಗೆ ತರಬೇತಿ ತರಗತಿಗಳಿಗೆ ಹಾಜರಾಗುತ್ತಿದ್ದೇನೆ, ಆದರೆ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿಲ್ಲ.
Protesters hold up a large banner with “Gen-Z” printed on it, in Dharwad on Friday.
ಧಾರವಾಡದಲ್ಲಿ ಯುವಕರ ಪ್ರತಿಭಟನೆ
Updated on

ಧಾರವಾಡ: ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಸಡಿಲಿಸಬೇಕೆಂದು ಒತ್ತಾಯಿಸಿ ಬೃಹತ್ ಸಂಖ್ಯೆಯ ಉದ್ಯೋಗ ಆಕಾಂಕ್ಷಿಗಳು, ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಯುವಕರ ಗುಂಪೊಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ ಮತ್ತು ಇತರರ ಚಿತ್ರಗಳನ್ನು ಹರಿದುಹಾಕಿದರು ಆ ಮೂಲಕ, ಸರ್ಕಾರವು ಯುವ ಚಳವಳಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬ ಪ್ರಬಲ ಸಂದೇಶ ರವಾನಿಸಿದರು.

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ಮತ್ತು ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನನಗೆ ಈಗ 27 ವರ್ಷ ವಯಸ್ಸಾಗಿದ್ದು, ಕಳೆದ ಎರಡು ವರ್ಷಗಳಿಂದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಗೆ ತರಬೇತಿ ತರಗತಿಗಳಿಗೆ ಹಾಜರಾಗುತ್ತಿದ್ದೇನೆ, ಆದರೆ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿಲ್ಲ.

ಮುಂದಿನ ವರ್ಷದ ವೇಳೆಗೆ ನಾನು ವಯಸ್ಸಿನ ಮಿತಿಯನ್ನು ದಾಟುತ್ತೇನೆ. ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ಸಡಿಲಿಸುವುದಾಗಿ ಭರವಸೆ ನೀಡಿದ ಸರ್ಕಾರ ಮೌನವಾಗಿದೆ ಎಂದು ಬಿಎಸ್ಸಿ ಮುಗಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರಿಹರದ ವಿದ್ಯಾರ್ಥಿ ಅರುಣ್ ಹೇಳಿದರು. ನಾವು ಪ್ರತಿ ತಿಂಗಳು ಸುಮಾರು 10,000 ರೂ. ಖರ್ಚು ಮಾಡಿ ಇಲ್ಲಿಯೇ ವಾಸಿಸುತ್ತಿದ್ದೇವೆ. ನಮ್ಮ ಬಡ ಪೋಷಕರು ನಮಗೆ ಒಳ್ಳೆಯ ಕೆಲಸ ಸಿಗುತ್ತದೆ ಎಂಬ ಭರವಸೆಯಿಂದ ಹಣ ಕಳುಹಿಸುತ್ತಲೇ ಇದ್ದಾರೆ. ಕೆಲಸವಿಲ್ಲದೆ ಮನೆಗೆ ಹಿಂತಿರುಗಲು ಸಾಧ್ಯವಾಗದ ಹಂತವನ್ನು ತಲುಪಿದ್ದೇವೆ. ನಮ್ಮ ಕುಟುಂಬಕ್ಕೆ ಹೊರೆಯಾಗುತ್ತಿದೆ" ಎಂದು ಅವರು ಹೇಳಿದರು.

Protesters hold up a large banner with “Gen-Z” printed on it, in Dharwad on Friday.
ಬೆಂಗಳೂರು: ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಕಳೆದ ಆರು ವರ್ಷಗಳಿಂದ ಭಾರಿ ಶುಲ್ಕ ಪಾವತಿಸಿ ಕೋಚಿಂಗ್ ತರಗತಿಗಳಿಗೆ ಹಾಜರಾಗುತ್ತಿದ್ದೇನೆ, ಸಬ್ ಇನ್ಸ್‌ಪೆಕ್ಟರ್ ಆಗಬೇಕೆಂಬ ಕನಸನ್ನು ಹೊಂದಿದ್ದರು ಮತ್ತು ಖಾಸಗಿ ವಲಯದಲ್ಲಿ ನನಗೆ ಯಾವುದೇ ಆಯ್ಕೆಗಳಿಲ್ಲ, ನನಗೀಗ 29 ವರ್ಷ ವಯಸ್ಸಾಗಿರುವುದರಿಂದ, ಪೋಷಕರು ಮದುವೆಯಾಗೆ ಒತ್ತಾಯಿಸುತ್ತಿದ್ದಾರೆ. ಸರ್ಕಾರ ವಯಸ್ಸಿನ ಮಿತಿಯನ್ನು ಸಡಿಲಿಸಿದರೆ, ಅವರು ತಮ್ಮ ಅದೃಷ್ಟ ಪ್ರರೀಕ್ಷೆ ಮಾಡುವುದಾಗಿ ರಾಯಚೂರಿನ ಕಿರಣ್ ಹೇಳಿದರು.

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಆಕಾಂಕ್ಷಿಯಾಗಿರುವ ಚಾಣುಕ್ಯ, ಪ್ರತಿಭಟನೆಯು ಯಾವುದೇ ಒಂದು ಸಂಘಟನೆ ಅಥವಾ ಒಬ್ಬ ವ್ಯಕ್ತಿಯ ಧ್ವನಿಯಲ್ಲ ಎಂದು ಹೇಳಿದರು. ಕಳೆದ ಎರಡು ವರ್ಷಗಳಿಂದ ಸರ್ಕಾರವು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳು ಕಾಯುತ್ತಿದ್ದಾರೆ, ಆದರೆ ಅದು ಇನ್ನೂ ಆಗಿಲ್ಲ. ಸಚಿವರು ಮತ್ತು ಚುನಾಯಿತ ಪ್ರತಿನಿಧಿಗಳು ಅವರ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ, ಹೆಚ್ಚಿನ ಸಂಖ್ಯೆಯ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ" ಎಂದು ಅವರು ಹೇಳಿದರು. "ನಾವು ಕಳೆದ ಆರರಿಂದ ಏಳು ವರ್ಷಗಳಿಂದ ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿದ್ದೇವೆ.

ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಸಚಿವರ ಮನೆಗಳು ಮತ್ತು ಕಚೇರಿಗಳನ್ನು ಮುತ್ತಿಗೆ ಹಾಕಲು ನಾವು ಸಿದ್ಧರಿದ್ದೇವೆ. ಈ ಪ್ರತಿಭಟನೆ ಟ್ರೇಲರ್ ಅಷ್ಟೇ. ಸರ್ಕಾರ ಮತ್ತಷ್ಟು ವಿಳಂಬ ಮಾಡಿದರೇ ನಮ್ಮ ಈ ಚಳುವಳಿ ಮತ್ತಷ್ಟು ಪ್ರಬಲವಾಗುತ್ತದೆ" ಎಂದು ಅವರು ಹೇಳಿದರು. ಪ್ರತಿಭಟನೆ ಹೆಚ್ಚುತ್ತಿದ್ದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾದರು. ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಇತರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com