
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ರಸ್ತೆ ಗುಂಡಿಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 22 ವರ್ಷದ ಧನುಶ್ರೀ ಆಯಾತಪ್ಪಿ ಕೆಳಗೆ ಬಿದ್ದಿದ್ದು ಟಿಪ್ಪರ್ ಆಕೆಯ ಮೇಲೆ ಹರಿದಿದೆ. ಘಟನೆ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement