
ಚಂಡೀಗಡ: ಗುರುಗ್ರಾಮದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ತನ್ನ ಹೆಂಡತಿಯೊಂದಿಗೆ ಜಗಳವಾಡಿ ನಂತರ ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಬ್ಬರೂ ಗುರುಗ್ರಾಮ್‌ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ಶರ್ಮಾಳ ದೇಹವು ನೆಲದ ಮೇಲೆ ಬಿತ್ತು. ಆಕೆಯ ಕುತ್ತಿಗೆಗೆ ಸ್ಕಾರ್ಫ್‌ನಿಂದ ಬಿಗಿದು ಹತ್ಯೆ ಮಾಡಿರುವುದು ಕಂಡುಬಂತು. ಕುಮಾರ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮಹಿಳೆಯ ಕುಟುಂಬವು ಕುಮಾರ್ ವಿರುದ್ಧ ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದೆ.
Advertisement