ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಬೆಳೆಹಾನಿ ಪರಿಹಾರಕ್ಕೆ ಆಗ್ರಹ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಸಚಿವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಪ್ರವಾಹದಿಂದಾಗಿ ಹೆಸರು, ಉದ್ದು, ತೊಗರಿ ಸೇರಿ ಎಲ್ಲ ಬಗೆಯ ಬೆಳೆಗಳಿಗೂ ಹಾನಿಯಾಗಿದೆ.
Narendra Modi - Mallikarjun Kharge
ನರೇಂದ್ರ ಮೋದಿ - ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಭಾರಿ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದು, ಬೆಳೆ ಹಾನಿಗೆ ಪರಿಹಾರ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಸಚಿವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಪ್ರವಾಹದಿಂದಾಗಿ ಹೆಸರು, ಉದ್ದು, ತೊಗರಿ ಸೇರಿ ಎಲ್ಲ ಬಗೆಯ ಬೆಳೆಗಳಿಗೂ ಹಾನಿಯಾಗಿದೆ. ಬೆಳೆ ಹಾನಿ ಬಗ್ಗೆ ವರದಿ ಬಂದ ಬಳಿಕ ಪರಿಹಾರ ನೀಡುವಂತೆ ಮೋದಿ ಅವರಿಗೆ ಸವಿಸ್ತಾರವಾಗಿ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಪ್ರವಾಹದಿಂದಾಗಿ ಬಹಳಷ್ಟು ನಷ್ಟ ಉಂಟಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಬಳಿಕ ಯಾವ ರೀತಿ ರೈತರಿಗೆ ಸಹಾಯ ಮಾಡಬೇಕು ಎಂದು ಸಿದ್ದರಾಮಯ್ಯ ನಿರ್ಧರಿಸುತ್ತಾರೆ. ಮುತುವರ್ಜಿ ವಹಿಸಿ ಆದಷ್ಟು ಬೇಗ ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

Narendra Modi - Mallikarjun Kharge
ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ: ಇಂದು ಸಿಎಂ ವೈಮಾನಿಕ ಸಮೀಕ್ಷೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com