
ಹಾಸನ: ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ .
ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಇನ್ನೂ ಈ ವೇಳೆ ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು ಗುರುತಿಸಲಾಗಿದೆ.
ಸ್ಪೋಟ ಸಂಭವಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿನ ಮನೆಯವರು ಭಯಭೀತರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಸುಮಾರು 8.30ರ ವೇಳೆಗೆ ಸ್ಪೋಟ ಸಂಭವಿಸಿದೆ.ಘಟನೆಯಲ್ಲಿ ಗಾಯಗೊಂಡ ದಂಪತಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಹೆಚ್ಚಿನ ಚಿಕಿತ್ಸೆ ಅವಶ್ಯೆಕತೆ ಇದ್ದುದರಿಂದ ಅವರನ್ಮು ಝೀರೋ ಟ್ರಾಫಿಕ್‍ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಘಟನೆ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನೂ ಘಟನೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
Advertisement