ಜಿಲ್ಲಾ ಉಸ್ತುವಾರಿ ಸಚಿವರ ಎಸಿ ಕೋಣೆಯಿಂದ ಹೊರ ಹಾಕಿ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಮಾಡಿ: ಸಿಎಂಗೆ ವಿಜಯೇಂದ್ರ ಆಗ್ರಹ

ರೈತರು ಹಾಗೂ ಸಂಕಷ್ಟಿತ ತಾಯಂದಿರ ಕಷ್ಟ ಆಲಿಸದೇ, ಕುಂಭಕರ್ಣ ನಿದ್ದೆಯಲ್ಲಿರುವ ರಾಜ್ಯ ಸರ್ಕಾರ ಈಗಲಾದಲೂ ಕಷ್ಟದಲ್ಲಿರುವ ಜನರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಧಾವಿಸದಿದ್ದರೆ ಈ ನಾಡಿನ ಜನ ಎಂದಿಗೂ ಕ್ಷಮಿಸಲಾರರು.
BJP leaders visited the flood-affected area.
ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರು.
Updated on

ಕಲಬುರಗಿ: ನೆರೆಪ್ರದೇಶಗಳ ಬಗ್ಗೆ ರಾಜ್ಯ ಸರ್ಕಾರ ಹೊಣೆಗಾರಿಕೆ ಇಲ್ಲದಂತೆ ವರ್ತಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಎಸಿ ಕೋಣೆಯಿಂದ ಹೊರಗೆ ಹಾಕಿ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಸೂಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಹೊನಗುಂಟದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ವಿಜಯೇಂದ್ರ ಹಾಗೂ ಛಲವಾದಿ ನಾರಾಯಣ ಸ್ವಾಮಿಯವರು ಸಂತ್ರಸ್ತರ ಸಂಕಷ್ಟಗಳನ್ನು ಆಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮನೆಗಳಿಗೆ ನೀರು ನುಗ್ಗಿದೆ, ಕೆಲವೇ ದಿನಗಳಲ್ಲಿ ರೈತರ ಮಡಿಲು ಸೇರಬೇಕಿದ್ದ ಬೆಳೆಗಳು ಸಂಪೂರ್ಣ ನಾಶವಾಗಿವೆ, ಸಚಿವರೊಬ್ಬರು ಪ್ರತಿನಿಧಿಸುವ ಕ್ಷೇತ್ರದಲ್ಲಿಯೂ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬ ತಾಯಂದಿರ ದೂರು- ದುಮ್ಮಾನಗಳು ನಿಜಕ್ಕೂ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಆಡಳಿತದಲ್ಲಿ ಈ ಮಟ್ಟಿನ ದುಸ್ಥಿತಿ ಇರುವುದು ಮೂಲಸೌಕರ್ಯ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗುತ್ತಿರುವುದು ದುರ್ದೈವದ ಸಂಗತಿ ಎಂದು ಹೇಳಿದ್ದಾರೆ.

ರೈತರು ಹಾಗೂ ಸಂಕಷ್ಟಿತ ತಾಯಂದಿರ ಕಷ್ಟ ಆಲಿಸದೇ, ಕುಂಭಕರ್ಣ ನಿದ್ದೆಯಲ್ಲಿರುವ ರಾಜ್ಯ ಸರ್ಕಾರ ಈಗಲಾದಲೂ ಕಷ್ಟದಲ್ಲಿರುವ ಜನರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಧಾವಿಸದಿದ್ದರೆ ಈ ನಾಡಿನ ಜನ ಎಂದಿಗೂ ಕ್ಷಮಿಸಲಾರರು ಎಂದು ತಿಳಿಸಿದ್ದಾರೆ.

ಎಲ್ಲಾ ಸಚಿವರು ವೈಮಾನಿಕ ಸಮೀಕ್ಷೆಯನ್ನೇ ಮಾಡುವುದಾದರೇ ಜನಪ್ರತಿನಿಧಿಗಳು ಏಕೆ ಬೇಕು? ಅದನ್ನೇ ಅಧಿಕಾರಗಳೇ ಮಾಡಬಹುದು. ಕಲಬುರಗಿಗೆ ಬಂದು ಪ್ರವಾಸ ಮಾಡಿ, ಸಭೆ ನಡೆಸಿ ಎರಡು ದಿನಗಳಾದ ಬಳಿಕ ಕೇಂದ್ರಕ್ಕೆ ಪರಿಹಾರಕ್ಕಾಗಿ ಪತ್ರ ಬರೆದಿದ್ದೇವೆ ಎಂದು ಹೇಳುವುದು ರಾಜ್ಯ ಸರ್ಕಾರ ಕೆಲಸವಲ್ಲ.

BJP leaders visited the flood-affected area.
ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ

ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ಏನೂ ಕೊಡಬೇಕೋ ಅದನ್ನು ಕೊಟ್ಟೇ ಕೊಡುತ್ತದೆ. ಆದರೆ, ರಾಜ್ಯ ಸರ್ಕಾರಕ್ಕೂ ಜವಾಬ್ದಾರಿ ಇರುತ್ತದೆ. ಮುಖ್ಯಮಂತ್ರಿ ಅವರು ಎಲ್ಲ ಉಸ್ತುವಾರಿ ಸಚಿವರನ್ನು ತಾಲ್ಲೂಕು, ಜಿಲ್ಲೆಗಳಿಗೆ ಕಳುಹಿಸಿ ರೈತರ ಸಂಕಷ್ಟ, ಸಮಸ್ಯೆ ಅರಿತು ಪರಿಹಾರ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

‘ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡುವುದು ಎಷ್ಟು ಮುಖ್ಯವೋ, ಆ ರೈತರನ್ನು ಭೇಟಿ ಮಾಡಿ ಧೈರ್ಯ ತುಂಬಿ ಸಾಂತ್ವನ ಹೇಳುವುದೂ ಅಷ್ಟೇ ಮುಖ್ಯ. ಈ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು. ಮುಖ್ಯಮಂತ್ರಿ ಅವರು ತಮ್ಮ ಉಸ್ತುವಾರಿ ಸಚಿವರು, ಕೃಷಿ ಸಚಿವರು, ಕಂದಾಯ ಸಚಿವರು ಒಂದು ತಿಂಗಳು ಬೆಂಗಳೂರಿಗೇ ಬರದಂತೆ ಹೇಳಬೇಕು. ಅವರಿಗೆಲ್ಲ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕಲ್ಪಿಸುವ ಕೆಲಸ ಮಾಡುವಂತೆ ಹೇಳಬೇಕು ಎಂದು ಒತ್ತಾಯಿಸಿದರು.

‘ಒಂದು ತಿಂಗಳ ಹಿಂದೆ ಸಂಕಷ್ಟದಲ್ಲಿದ್ದ ರೈತರೊಬ್ಬರು ಬೆಳೆ ಹಾನಿ ಬಗೆಗೆ ಅಳಲು ತೋಡಿಕೊಳ್ಳುವಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಅಸಹಾಯಕರಾಗಿ ಮಾತನಾಡಿದರು. ಖರ್ಗೆ ಕುಟುಂಬಕ್ಕೆ ಪರಿಹಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ನೀಡಲಿ. ಅದರೊಂದಿಗೆ ಸಂಕಷ್ಟದಲ್ಲಿರುವ ಅನ್ನದಾತರಿಗೂ ಪರಿಹಾರ ಕೊಡುವ ಕೆಲಸ ರಾಜ್ಯ ಸರ್ಕಾರ ಮಾಡಲಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಬಸವರಾಜ್ ಮುತ್ತಿಮಡು, ಮಾಜಿ ಸಂಸದ ಡಾ.ಉಮೇಶ್ ಜಾಧವ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ್ ಪಾಟೀಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com