ಹಾವೇರಿಯಲ್ಲಿ ಭೀಕರ ಅಪಘಾತ: ಬಸ್ ಗಾಗಿ ಕಾದಿದ್ದವರ ಮೇಲೆ Bus ರೂಪದಲ್ಲೇ ಬಂದ ಜವರಾಯ! ಮಗು ಸಾವು! Video

ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.
bus rams into platform
ಬಸ್ ಗಾಗಿ ಕಾದಿದ್ದವರ ಮೇಲೆ ಹರಿದ ಬಸ್
Updated on

ಹಾವೇರಿ: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಗಾಗಿ ಕಾದಿದ್ದವರ ಮೇಲೆಯೇ ಸರ್ಕಾರಿ ಬಸ್ ಹರಿದಿದೆ.

ಇಂದು (ಏಪ್ರಿಲ್ 1) ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.

ಪರಿಣಾಮ ಈ ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಂತೆಯೇ 2 ವರ್ಷದ ಪುಟ್ಟ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.

ಪ್ಲಾಟ್ ಫಾರ್ಮ್ ನಲ್ಲಿ ನಿಲ್ಲಬೇಕಿದ್ದ ಬಸ್ ಏಕಾಏಕಿ ಪ್ಲಾಟ್ ಫಾರ್ಮ್ ದಾಟಿ ಅಲ್ಲಿ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ.

bus rams into platform
ನಿಯಮಿತವಾಗಿ ಕೆಲಸಕ್ಕೆ ಬಾರದೆ ದುರ್ವರ್ತನೆ: ಎಚ್ಚರಿಕೆ ಕೊಟ್ಟಿದ್ದಕ್ಕೆ ಮೇಲಾಧಿಕಾರಿಯ ಇರಿದು ಹತ್ಯೆ..!

ಈ ಅಪಘಾತದಲ್ಲಿ ಕೇವಲ ಮಗು ಮಾತ್ರವಲ್ಲದೆ, ಬಂಕಾಪುರ ಪಟ್ಟಣದ ನಿವಾಸಿಗಳಾದ ವಾಸುದೇವ (44), ಹರ್ಷಾ (6) ಹಾಗೂ ಕಾವ್ಯಾಂಜಲಿ (39) ಎಂಬುವವರಿಗೂ ಗಂಭೀರ ಗಾಯಗಳಾಗಿವೆ.

ಇವರೆಲ್ಲರೂ ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ 2 ವರ್ಷದ ಪುಟ್ಟ ಮಗು ಹಜರತ್ ಅಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗಿದ್ದೇನು?

ಇಂದು ಬೆಳಿಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಹಾವೇರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಪ್ರಯಾಣಿಕರ ಓಡಾಟವಿತ್ತು. ಸವಣೂರು ಪ್ಲಾಟ್‌ಫಾರ್ಮ್ ಬಳಿ ಪ್ರಯಾಣಿಕರು ತಾವು ಹೋಗಬೇಕಾದ ಬಸ್‌ಗಳಿಗಾಗಿ ಕಾಯುತ್ತಿದ್ದರು.

ಈ ವೇಳೆ ಸವಣೂರು ಕಡೆಗೆ ತೆರಳಬೇಕಿದ್ದ ಬಸ್ ನಿಲ್ದಾಣಕ್ಕೆ ಬಂದಿದೆ. ಬಸ್ ಬರುತ್ತಿದ್ದಂತೆ ಪ್ರಯಾಣಿಕರು ಬಸ್‌ನ ಮುಂಭಾಗದಲ್ಲಿದ್ದ ಬೋರ್ಡ್ ನೋಡಲು ಮುಂದಕ್ಕೆ ಬಂದಿದ್ದಾರೆ.

ಈ ವೇಳೆ ಚಾಲಕ ಬಸ್ಸನ್ನು ನಿಯಂತ್ರಿಸಲಾಗದೆ, ಅತಿಯಾದ ವೇಗದಿಂದ ಪ್ಲಾಟ್‌ಫಾರ್ಮ್ ಮೇಲಿದ್ದ ಜನರ ಮೇಲೆಯೇ ನುಗ್ಗಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com