Bantwal: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ, Video

ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ಮೆಲ್ಕಾರ್ ನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ.
Woman Flung 10 Feet After Being Struck by Speeding Car
ಬಂಟ್ವಾಳ ಅಪಘಾತ, 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ
Updated on

ಬಂಟ್ವಾಳ: ರಸ್ತೆ ದಾಟಲು ಯತ್ನಿಸುತ್ತಿದ್ದ ಮಹಿಳೆಯೊಬ್ಬರು ಕಾರು ಡಿಕ್ಕಿ ಹೊಡೆದ ಪರಿಣಾಮ, ಬರೊಬ್ಬರಿ 10 ಅಡಿ ಮೇಲಕ್ಕೆ ಹಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಎಂದು ಗುರುತಿಸಲಾಗಿದೆ. ಈ ಆಘಾತಕಾರಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೂಲಗಳ ಪ್ರಕಾರ ಭಾರತಿ ತಮ್ಮ ಮಗಳು ದೀಪಶ್ರೀ ಜೊತೆ ಗುಳಿಗಜ್ಜೆ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಸಜಿಪಮೂಡ್‌ಗೆ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ಮೆಲ್ಕಾರ್ ನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ.

ಕಾರು ಢಿಕ್ಕಿಯಾದ ರಭಸಕ್ಕೆ ಮಹಿಳೆ ಬರೊಬ್ಬರಿ 10 ಅಡಿ ಮೇಲಕ್ಕೆ ಹಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಈ ಭೀಕರ ಅಪಘಾತದ ದೃಶ್ಯ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Woman Flung 10 Feet After Being Struck by Speeding Car
ಹಾವೇರಿಯಲ್ಲಿ ಭೀಕರ ಅಪಘಾತ: ಬಸ್ ಗಾಗಿ ಕಾದಿದ್ದವರ ಮೇಲೆ Bus ರೂಪದಲ್ಲೇ ಬಂದ ಜವರಾಯ! ಮಗು ಸಾವು; Video

ಪೊಲೀಸ್ ತನಿಖೆ

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಸೂಚನೆಗಳ ಪ್ರಕಾರ, ಅತಿ ವೇಗವು ಘಟನೆಗೆ ಕಾರಣವಾಗಿರಬಹುದು, ಆದರೂ ಅಧಿಕಾರಿಗಳು ಇನ್ನೂ ನಿಖರವಾದ ಕಾರಣವನ್ನು ದೃಢಪಡಿಸಿಲ್ಲ.

ಸಂಚಾರ ಉಲ್ಲಂಘನೆ ಅಥವಾ ಪಾದಚಾರಿ ಸುರಕ್ಷತಾ ಕ್ರಮಗಳ ಕೊರತೆಯು ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಇಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲಿ ಸ್ಪೀಡ್ ಬ್ರೇಕರ್ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com