ಪೆಟ್ರೋಲ್-ಡಿಸೇಲ್ ಕೊರತೆ ಆತಂಕ: ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಮಹಿಳೆಗೆ ಗಂಭೀರ ಗಾಯ

ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ 10 ಲೀಟರ್ ಪೆಟ್ರೋಲ್'ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್‌ ಬಳಿ ಇಡಲಾಗಿತ್ತು.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಪೆಟ್ರೋಲ್-ಡಿಸೇಲ್ ಕೊರತೆಯಾಗುವ ಆತಂಕದಲ್ಲಿ ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್'ಗೆ ಬೆಂಕಿ ಹೊತ್ತಿಕೊಂಡು, ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ಆವರಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಧಾರವಾಡ ತಾಲೂಕಿನ‌ ತಡಕೋಡ ಗ್ರಾಮದ ಹರಿಜನಕೇರಿ‌ ಓಣಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ 10 ಲೀಟರ್ ಪೆಟ್ರೋಲ್'ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್‌ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿದ್ದಾಗ ಏಕಾಏಕಿ ಕ್ಯಾನ್‌ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದ್ದು, ಇಡೀ ಮನೆಗೆ ಬೆಂಕಿ‌ ಆವರಿಸಿದೆ.

ಅಡುಗೆ ಮನೆಯಲ್ಲಿ ಸಿಲುಕಿದ್ದ ಅತ್ತಿಗೆಯನ್ನು ಮೈದುನ ಯಲ್ಲಪ್ಪ ಕಾಪಾಡಿದ್ದು, ಈ ವೇಳೆ ಅವನಿಗೂ ಗಾಯಗಳಾಗಿವೆ. ಆದರೆ, ಮಹಿಳೆಯ ಸ್ಥಿತಿ ಮಾತ್ರ ಗಂಭೀರವಾಗಿದೆ.

ಈ ವೇಳೆ ಮನೆಯ ಸದಸ್ಯರು ಹೊರಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ. ಅಗ್ನಿ ಶಾಮಕ‌ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸದ್ಯ ಗರಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

File photo
ಬೆಂಗಳೂರಿನಲ್ಲಿ ಭೀಕರ ಅಪಘಾತ: ತಿರುಪತಿಗೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ; Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com