ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆ ಮಾಡಿ: ನಾಗರಿಕ ಸಂಘಟನೆಗಳ ಆಗ್ರಹ

ಪ್ರತಿಭಟನಾಕಾರರು ಈ ಯೋಜನೆಗಳನ್ನು ಮೂರ್ಖ ಯೋಜನೆಗಳು ಎಂದು ಕರೆದರು. ಯೋಜನಾ ಸ್ಥಳಗಳ ಸಮೀಪ ಪ್ರತಿಭಟಿಸಿ ಈ ಕುರಿತು ಸಾರ್ವಜನಿಕರ ಗಮನ ಸೆಳೆದರು.
protest in front of Mysore lamps
ಮೈಸೂರು ಲ್ಯಾಂಪ್ಸ್ ಬಳಿ ಯೋಜನೆಗಳ ಶೀಘ್ರ ಕಾಮಗಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ನಾಗರಿಕ ಸಂಘಟನೆಗಳ ಸದಸ್ಯರು
Updated on

ಬೆಂಗಳೂರು: ಪ್ರಸ್ತುತ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಕೈಗೊಳ್ಳಲು ಉದ್ದೇಶಿಸಿರುವ ಅನೇಕ ಯೋಜನೆಗಳು ನಾಗರಿಕ ವಿರೋಧಿಯಾಗಿವೆ ಎಂದು ಗ್ರೀನ್‌ಪೀಸ್ ಇಂಡಿಯಾ ಮತ್ತು ಬೆಂಗಳೂರು ರೈಸಿಂಗ್ ಅಭಿಯಾನದ ಭಾಗವಾಗಿರುವ ಹಲವು ನಾಗರಿಕ ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ನಿನ್ನೆ ಏಪ್ರಿಲ್ 1ರ ಮೂರ್ಖರ ದಿನ ಪ್ರತಿಭಟನೆ ನಡೆಸಿದವು.

ಪ್ರತಿಭಟನಾಕಾರರು ಈ ಯೋಜನೆಗಳನ್ನು ಮೂರ್ಖ ಯೋಜನೆಗಳು ಎಂದು ಕರೆದರು. ಯೋಜನಾ ಸ್ಥಳಗಳ ಸಮೀಪ ಪ್ರತಿಭಟಿಸಿ ಈ ಕುರಿತು ಸಾರ್ವಜನಿಕರ ಗಮನ ಸೆಳೆದರು. ನಾಲ್ಕು ವರ್ಷಕ್ಕೂ ಹೆಚ್ಚುಕಾಲದಿಂದ ಸ್ಥಗಿತಗೊಂಡಿರುವ ರಾಜರಾಜೇಶ್ವರಿ ನಗರದ ಕಮಾನಿನ ಬಳಿಯ ಫ್ಲೈಓವರ್ ಮತ್ತು ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೊಮ್ಮಸಂದ್ರ ಫ್ಲೈಓವರ್ ಬೃಹತ್‌ ಯೋಜನೆಗಳು ಪೂರ್ಣವಾಗದೆ ನಗರದ ಜನರ ದೈನಂದಿನ ಜೀವನಕ್ಕೆ ಅಡ್ಡಿಯಾಗಿವೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರೀನ್‌ಪೀಸ್ ಇಂಡಿಯಾದ ಹವಾಮಾನ ಮತ್ತು ಇಂಧನ ವಿಭಾಗದ ಕ್ಯಾಂಪೇನರ್‌ ಅಮೃತಾ ಎಸ್‌.ಎನ್‌, ಇವು ದೈನಂದಿನ ಜನಜೀವನಕ್ಕೆ ಅಡ್ಡಿ ಉಂಟುಮಾಡುವ, ವಿಳಂಬಗತಿಯಲ್ಲಿ ಸಾಗುವ, ಭರಿಸಲಾಗದ ವೆಚ್ಚಗಳ ಹೊರೆಯಿಂದ ಕೂಡಿರುವ, ಇನ್ನೂ ಪೂರ್ಣಗೊಳ್ಳದ ಅಥವಾ ಉದ್ಧೇಶಿತ ಸಮಸ್ಯೆಗಳನ್ನೇ ಪರಿಹರಿಸಲು ವಿಫಲವಾಗುವ ಯೋಜನೆಗಳಾಗಿವೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA)ದ ಚುನಾವಣೆಗೆ ಉಮೇದುವಾರ ಅಭ್ಯರ್ಥಿಗಳು, ನಾಗರಿಕರು ವಿರೋಧಿಸುತ್ತಿರುವ ಈ ಸಮಸ್ಯೆಗಳನ್ನು ಚುನಾವಣೆಗೆ ಮುನ್ನವೇ ಬಗೆಹರಿಸಬೇಕು. ಬೆಂಗಳೂರು ಜಾಗತಿಕ ಮಟ್ಟದಲ್ಲಿ ನಗೆಪಾಟಲಾಗುವುದನ್ನು ತಡೆಯಬೇಕು ಎಂದರು.

protest in front of Mysore lamps
ಬೆಂಗಳೂರು ನಗರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ: ಹಿಂದಿನ ವಸ್ತ್ರ ಸಂಹಿತೆಯನ್ನೇ ಮುಂದುವರಿಸಲು ನಿರ್ಧಾರ..!

ಮಲ್ಲೇಶ್ವರಂ ಸೋಶಿಯಲ್ ಸಂಸ್ಥೆ ಸದಸ್ಯ ಕೌಸ್ತುಭ್ ರಾವ್, ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಮತ್ತು ಜೀವ ವೈವಿಧ್ಯತೆಗೆ ಪ್ರಾಧಾನ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ನಗರದಲ್ಲಿ ಈಗಿರುವ ಹಸಿರು ಆವರಣವನ್ನು ರಕ್ಷಿಸುವುದು ಮೊದಲ ಹೆಜ್ಜೆಯಾಗಬೇಕು.

ನಿಷ್ಕ್ರಿಯಗೊಂಡಿರುವ ಮೈಸೂರು ಲ್ಯಾಂಪ್ಸ್ ಕಾರ್ಖಾನೆಯ ಸಮೀಪದ ದಟ್ಟ ಅರಣ್ಯ ಪರಿಸರವು ಎಲ್ಲ ವರ್ಗದ ಜನರಿಗೆ ಉಪಯುಕ್ತವಾಗುವ ಸಾರ್ವಜನಿಕ ಬಳಕೆಯ ಸ್ಥಳವಾಗಬಹುದು. ಇದನ್ನು ಕನ್‌ವೆನ್‌ಷನ್‌ ಸೆಂಟರ್ ಆಗಿ ಪರಿವರ್ತಿಸುವುದು ಕೇವಲ ಕೆಲವೇ ವರ್ಗಗಳಿಗೆ ಉಪಯುಕ್ತವಾಗುತ್ತದೆ. ಇದು ಟ್ರಾಫಿಕ್, ಮಾಲಿನ್ಯ ಮತ್ತು ನಗರದ ತಾಪಮಾನವನ್ನು ಹೆಚ್ಚಿಸುತ್ತದೆಯೇ ಹೊರತು, ಜನರಿಗೆ ಬೇಕಾದ ಸಾರ್ವಜನಿಕ ಹಸಿರು ಸ್ಥಳಗಳ ಕೊರತೆಯನ್ನು ಬಗೆಹರಿಸುವುದಿಲ್ಲ ಎಂದು ತಮ್ಮ ಕಳಕಳಿಯನ್ನು ವ್ಯಕ್ತಪಡಿಸಿದರು.

ನಗರದಾದ್ಯಂತ ನಡೆಸಲಾದ ಈ ಪ್ರತಿಭಟನೆಗಳು ಕಳೆದ ದಶಕದ ಅಭಿವೃದ್ಧಿ ಮಾದರಿಯ ವಿರುದ್ಧದ ಪ್ರತಿರೋಧವಾಗಿದ್ದು, ಈ ಮಾದರಿಗಳು ಪಾದಚಾರಿ ಮಾರ್ಗ, ಉಸಿರಾಡಲು ಶುದ್ಧ ಗಾಳಿ ಮತ್ತು ನಗರದ ಕಡಿಮೆಯಾಗುತ್ತಿರುವ “ಹಸಿರು-ನೀಲಿ” (ಕೆರೆಗಳು ಮತ್ತು ಉದ್ಯಾನಗಳು) ಪ್ರದೇಶಗಳಿಗಿಂತ ಫ್ಲೈಓವರ್‌ಗಳು ಮತ್ತು ರಸ್ತೆ ವಿಸ್ತರಣೆಗಳಿಗೆ ಆದ್ಯತೆ ನೀಡಿದ್ದನ್ನು ಪ್ರಶ್ನಿಸಿದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com