ಬೆಂಗಳೂರು: ನೀರು ತುಂಬಿದ್ದ ಬಕೆಟ್ ನಲ್ಲಿ ಮುಳುಗಿ ಮಗು ಸಾವು; ಮನನೊಂದ ತಾಯಿ ನೇಣಿಗೆ ಶರಣು!

ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ ಗಂಡು ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ.

ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ ಗಂಡು ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ. ಪ್ರತಿಭಾ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದರು. ಗುರುವಾರ ಸಂಜೆ ಟೆರೇಸ್ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಪ್ರತಿಭಾ ಅವರು ಮೇಲಕ್ಕೆ ಹೋಗಿದ್ದಾಗ ದುರಂತ ಸಂಭವಿಸಿದೆ.

ತಾಯಿ ಟೆರೇಸ್ ಮೇಲೆ ಹೋಗಿದ್ದ ಸಮಯದಲ್ಲಿ ಮಗು ಆಟವಾಡುತ್ತಾ ಬಚ್ಚಲು ಮನೆಗೆ ಹೋಗಿದೆ. ಅಲ್ಲಿ ನೀರಿನಿಂದ ತುಂಬಿದ್ದ ಬಕೆಟ್‌ನಲ್ಲಿ ಮುಳುಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ. ಬಟ್ಟೆ ತಂದು ಕೆಳಗೆ ಬಂದ ಪ್ರತಿಭಾಗೆ ಮಗುವಿನ ಸ್ಥಿತಿ ಕಂಡು ದಿಕ್ಕು ತೋಚದಂತಾಗಿದೆ. ಮಗು ಬಾರದ ಲೋಕಕ್ಕೆ ಪಯಣಿಸಿರುವುದು ಖಚಿತವಾದಾಗ, ಪ್ರತಿಭಾ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ.

ರಾತ್ರಿ ಪತಿ ಮಹಾಂತೇಶ್ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ತಮ್ಮ ಬಳಿಯಿದ್ದ ಕೀಲಿಯಿಂದ ಬಾಗಿಲು ತೆರೆದು ಒಳಹೋದಾಗ ಪ್ರತಿಭಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗು ಹಾಸಿಗೆಯ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು.

Representational image
ಬೆಂಗಳೂರಿನಲ್ಲಿ ದಾರುಣ ಘಟನೆ: ಪತಿ ಆತ್ಮಹತ್ಯೆ ಬೆನ್ನಲ್ಲೇ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು!

ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್​​ನಿಂದ ಪತಿಗೆ ಸಾವಿನ ರಹಸ್ಯ ಗೊತ್ತಾಗಿದೆ. ‘ನನ್ನ ಮಗುವಿನ ಸಾವಿಗೆ ನಾನೇ ಕಾರಣ, ಅವನನ್ನು ಉಳಿಸಿಕೊಳ್ಳಲು ನನ್ನಿಂದ ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪ್ರತಿಭಾ ಡೆತ್​ನೋಟ್​​ನಲ್ಲಿ ಬರೆದಿಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com