ಭೀಕರ: ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾರು, ಪರಿಸ್ಥಿತಿ ಗಂಭೀರ, Video

ಘಟನೆಯಲ್ಲಿ ಜ್ಞಾನಾಬಾಯಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಲಾಗಿದೆ ಎಂದು ತಿಳಿದುಬಂದಿದೆ.
Bidar Hit and Run
ಬೀದರ್ ಹಿಟ್ ಅಂಡ್ ರನ್
Updated on

ಬೀದರ್: ರಸ್ತೆ ಬದಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ವೇಗವಾಗಿ ಬಂದ ಕಾರೊಂದು ಹರಿದೆ ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಪೊಲೀಸ್ ಪೇದೆಯೊಬ್ಬರ ಕಾರು ವೇಗವಾಗಿ ಹರಿದಿದೆ.

ಘಟನೆಯಲ್ಲಿ ಜ್ಞಾನಾಬಾಯಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ.

ಆಗಿದ್ದೇನು?

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಚಿನ್ನದ ಅಂಗಡಿಯೊಂದರ ಮುಂಭಾಗದಲ್ಲಿ ಎಂದಿನಂತೆ ಜ್ಞಾನಾಬಾಯಿ (55) ಎಂಬ ಮಹಿಳೆ ರಸ್ತೆ ಬದಿಯಲ್ಲಿ ಕಸ ಗುಡಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಅತೀ ವೇಗವಾಗಿ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಕಾರೊಂದು ನೇರವಾಗಿ ಮಹಿಳೆಯ ಮೇಲೆ ಹರಿದಿದೆ. ಕಾರು ಹರಿದ ರಭಸಕ್ಕೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಜ್ಞಾನಾಬಾಯಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರವಾದ ಪೆಟ್ಟು ಬಿದ್ದಿರುವುದರಿಂದ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸದ್ಯ ಅವರಿಗೆ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

Bidar Hit and Run
ಹುಬ್ಬಳ್ಳಿ: ಮತ್ತಿನ ಔಷಧ ನೀಡಿ ಅತ್ಯಾಚಾರ ಮಾಡಿದ Sameer Mulla: ಸಂತ್ರಸ್ತೆ ಹೇಳಿಕೆ; love jihad ಅಲ್ಲ ಎಂದ ಪೊಲೀಸರು! Video

ಪೊಲೀಸ್ ಪೇದೆ ಕಾರು

ಈ ಭೀಕರ ಅಪಘಾತಕ್ಕೆ ಕಾರಣವಾದ ಕಾರು ಮೆಹಕರ್ ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಸೇರಿದ್ದೆಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಪೇದೆ ಅವರೇ ಕಾರನ್ನು ಚಾಲನೆ ಮಾಡುತ್ತಿದ್ದರೇ ಅಥವಾ ಬೇರೆಯವರು ಇದ್ದರೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ. ಅಪಘಾತದ ದೃಶ್ಯಗಳು ಲಭ್ಯವಿದ್ದು, ಕಾರು ಎಷ್ಟು ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದಿದೆ ಎಂಬುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಭಾಲ್ಕಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com