ತುಮಕೂರು ಬಳಿ ಖಾಸಗಿ ಬಸ್​​​ಗೆ KSRTC ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ, ಚಿತ್ರದುರ್ಗದಲ್ಲಿ ಲಾರಿ-ಕಾರು ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

ಈ ಭೀಕರ ಅಪಘಾತದ ಭಯಾನಕ ದೃಶ್ಯ ಮತ್ತೊಂದು ಬಸ್‌ನ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದೆ. ನಿಂತಿದ್ದ ಬಸ್​​ಗೆ ಕೆಎಸ್​ಆರ್​ಟಿಸಿ ಬಸ್​​ ಅತೀ ವೇಗವಾಗಿ ಬಂದು ಡಿಕ್ಕಿಯಾಗಿದೆ.
Car-Lorry accident in Chitradurga
ಚಿತ್ರದುರ್ಗದಲ್ಲಿ ಲಾರಿ-ಕಾರು ಡಿಕ್ಕಿ
Updated on

ತುಮಕೂರು: ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್​​ಗೆ ಕೆಎಸ್​ಆರ್​​ಟಿಸಿ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH-48) ಸಂಭವಿಸಿದೆ. ನಿಂತಿದ್ದ ಖಾಸಗಿ ಬಸ್‌ಗೆ ಹಿಂದಿನಿಂದ ಬಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಭೀಕರವಾಗಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್​ನಲ್ಲಿದ್ದ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈ ಭೀಕರ ಅಪಘಾತದ ಭಯಾನಕ ದೃಶ್ಯ ಮತ್ತೊಂದು ಬಸ್‌ನ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದೆ. ನಿಂತಿದ್ದ ಬಸ್​​ಗೆ ಕೆಎಸ್​ಆರ್​ಟಿಸಿ ಬಸ್​​ ಅತೀ ವೇಗವಾಗಿ ಬಂದು ಡಿಕ್ಕಿಯಾಗಿದೆ.

Car-Lorry accident in Chitradurga
ಶಿರಸಿ ಬಳಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, 40ಕ್ಕೂ ಹೆಚ್ಚು ಜನರಿಗೆ ಗಾಯ

ಮತ್ತೊಂದು ಬಸ್​​ನ ಡ್ಯಾಶ್​​ ಕ್ಯಾಮ್​ನಲ್ಲಿ ಅಪಘಾತದ ದೃಶ್ಯ ಸೆರೆ!

ಈ ಭೀಕರ ಅಪಘಾತದ ದೃಶ್ಯವು ಹಿಂದಿನಿಂದ ಬರುತ್ತಿದ್ದ ಗುರುಶಕ್ತಿ ಬಸ್‌ನ ಡ್ಯಾಶ್ ಕ್ಯಾಮ್‌ನಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಆ ವಿಡಿಯೋದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಿಂದಿನಿಂದ ಬಂದು ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯುವ ಭಯಾನಕ ದೃಶ್ಯ ಕಂಡುಬಂದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ-ಕಾರು ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ರವಿಚಂದ್ರ (40ವ), ಸಂತೋಷ್ (25ವ) ಮೃತರಾಗಿದ್ದಾರೆ.

ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದಾಗ ಅಪಘಾತವಾಗಿದ್ದು, ಬಳ್ಳಾರಿ ಕಡೆಯಿಂದ ಚಳ್ಳಕೆರೆ ಕಡೆ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Car-Lorry accident in Chitradurga
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ ಕಣ್ಣೆದುರೇ 4 ವರ್ಷದ ಬಾಲಕಿ ದಾರುಣ ಸಾವು..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com