

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.
ಬಾಗಲಕೋಟೆಯ ಕುಮಾರೇಶ್ವರ ಕ್ಯಾಂಪಸ್ನಲ್ಲಿ ಕರಪತ್ರ ಹಿಡಿದು ಬಂದಿದ್ದ NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್ಐ ಅಶೋಕ ಚೌಹಾಣ್ರನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದ್ದರೆ ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ ಪಿಎಸ್ ಐ ಅಶೋಕ್ರನ್ನ ವರ್ಗಾವಣೆ ಮಾಡಲಾಗಿದೆ.
Advertisement