ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್

ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೋರ್ವ ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿಬಂದಿದ್ದು ಈ ಸಂಬಂಧ ಆರೋಪಿ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು.
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
Updated on

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದ್ದು ಮುಸ್ಲಿಂ ಯುವಕನೋರ್ವ ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿಬಂದಿದ್ದು ಈ ಸಂಬಂಧ ಆರೋಪಿ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು.

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್ ಸಿಕ್ಕಿದ್ದು ಇದೇ ಪ್ರಕರಣದಲ್ಲಿ ಯುವತಿ ಮಾತನಾಡಿದ್ದು ಎನ್ನಲಾದ ಅನೇಕ ವಿಡಿಯೋಗಳು ವೈರಲ್ ಆಗಿವೆ. ವೈರಲ್ ವಿಡಿಯೋದಲ್ಲಿ ಯುವತಿ ನಾನು ನಾವಿಬ್ಬರು ಇಷ್ಟಪಟ್ಟಿದ್ದೆವು. ಅದರಂತೆ ಧಾರವಾಡ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿದ್ದೆವು ಎಂದು ಯುವತಿ ಹೇಳಿದ್ದಾಳೆ.

ನಾನು ಮುಫಿಜ್ ನನ್ನು ಸಬ್ ರಿಜಿಸ್ಟರ್ ಮದುವೆಯಾಗಿರುವ ವಿಚಾರ RSS ಗೆ ಗೊತ್ತಾಗಿತ್ತು. ನಮ್ಮ ಮನೆಗೆ ಬಂದು ಅನೇಕ ಬಾರಿ ಕೌನ್ಸಿಲಿಂಗ್ ಮಾಡಿದ್ದರು. ಅವರ ಧರ್ಮ ಬೇರೆ, ನಮ್ಮ ಧರ್ಮ ಬೇರೆ ಅಂತ ಹೇಳಿದ್ದರು. ನಾವು ಮುಫಿಜ್ ಮೇಲೆ ಕೇಸ್ ಹಾಕಿಸುತ್ತೇವೆ ಅಂತ ಹೇಳಿದ್ದರು. ಮೊದ ಮೊದಲು ಆತನ ಮೇಲೆ ಪ್ರಕರಣ ದಾಖಲಿಸುವುದಿಲ್ಲ ಎಂದು ಹೇಳಿದ್ದ ಯುವತಿ ಇದೀಗ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ.

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
Watch | ಲವ್ ಜಿಹಾದ್? ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ಸಮೀರ್ ಗೆ ಥಳಿತ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com