ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು.
Bengaluru IT employee died in Chikamagaluru
ಚಿಕ್ಕಮಗಳೂರಿನಲ್ಲಿ ನೀರುಪಾಲಾದ ಬೆಂಗಳೂರಿನ ಐಟಿ ಉದ್ಯೋಗಿ
Updated on

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27ವ) ಎಂದು ಗುರುತಿಸಲಾಗಿದೆ.

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.

Bengaluru IT employee died in Chikamagaluru
ಶಿರಸಿ ಬಳಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, 40ಕ್ಕೂ ಹೆಚ್ಚು ಜನರಿಗೆ ಗಾಯ

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಮೃತದೇಹ ಪತ್ತೆಯಾಗಿದೆ.

ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com