

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಒಂದೇ ದಿನ ಪತಿ, ಪತ್ನಿ ಸಾವನ್ನಪ್ಪಿದ ಘಟನೆ ನಡೆದಿದ್ದು, ದಂಪತಿಯ ಮೂವರು ಮಕ್ಕಳು ಅನಾಥರಾಗಿದ್ದಾರೆ.
ಮೃತ ದಂಪತಿಯನ್ನು ಅರವಳ್ಳಿ ಗ್ರಾಮದ ಕರೆಪ್ಪ(36) ಹಾಗೂ ಅವರ ಪತ್ನಿ ಮಧುರಾ(30) ಎಂದು ಗುರುತಿಸಲಾಗಿದೆ.
ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಆದರೆ ಅವರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.
ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಕರೆಪ್ಪ, ಬೈಕ್‌ನಲ್ಲಿ ಆಸ್ಪತ್ರೆಗೆ ಧಾವಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಸರದಲ್ಲಿ ಬರುತ್ತಿದ್ದ ವೇಳೆ ಬೈಕ್, ಬಸ್ ಚಕ್ರಕ್ಕೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ.
ಮೂವರು ಮಕ್ಕಳು ಅನಾಥ!
ಒಂದೇ ದಿನ ದಂಪತಿಗಳಿಬ್ಬರ ಸಾವಿನಿಂದ ಕುಟುಂಬದಲ್ಲಿ ಶೋಕದ ವಾತಾವರಣ ಆವರಿಸಿದ್ದು, ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ದಂಪತಿಗೆ ಒಂದು ಹೆಣ್ಣು ಮಗು ಹಾಗೂ ಇಬ್ಬರು ಗಂಡು ಮಕ್ಕಳಿದ್ದು, ಇದೀಗ ಮೂವರು ಅನಾಥರಾಗಿದ್ದಾರೆ.
ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Advertisement