ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವಿಡಿಯೋ ಕಾಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂತ್ರಸ್ತೆ ನಾಪತ್ತೆ!

ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತ ಮಹಿಳೆ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.
Jaya Mruthyunjaya Swamiji
ಜಯಮೃತ್ಯುಂಜಯ ಸ್ವಾಮೀಜಿ
Updated on

ಬೆಂಗಳೂರು: ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತ ಮಹಿಳೆ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಹೋರಾಟದ ನೇತೃತ್ವವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದು, ಸ್ವತಃ ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿಕೊಂಡು, ಲೈಂಗಿಕವಾಗಿ ಸಹಕರಿಸುವಂತೆ ಮತ್ತು ಪ್ರತಿನಿತ್ಯ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Jaya Mruthyunjaya Swamiji
ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು!

ತಮ್ಮ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಹಿಳೆ ವಿರುದ್ಧ ಸ್ವಾಮೀಜಿ ಪ್ರತಿದೂರು ದಾಖಲಿಸುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದಾರೆ. ಪೊಲೀಸರು, ಮಹಿಳೆಯನ್ನು ಸಂಪರ್ಕಿಸಲು ಎಷ್ಟೇ ಯತ್ನ ಮಾಡಿದ್ರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ.

ಪೊಲೀಸರು ಮಹಿಳೆಯ ಅಧಿಕೃತ ನಿವಾಸಕ್ಕೂ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೂ ಮಹಿಳೆ ಪತ್ತೆಯಾಗಿಲ್ಲ. ಮಹಿಳೆ ಫೋನ್ ನಂಬರ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ ಪೊಲೀಸರು ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

ಸ್ವಾಮೀಜಿಯಿಂದ ಪ್ರತಿದೂರು

ಇನ್ನೊಂದೆಡೆ, ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಿರುದ್ಧ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸ್ವಾಮೀಜಿ ತಮ್ಮ ದೂರಿನಲ್ಲಿ, ಸಂತ್ರಸ್ತೆ ಮಹಿಳೆ ತಾನು ಅನಾಥಾಶ್ರಮ ನಡೆಸುತ್ತಿರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ. ಅಲ್ಲದೆ ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com