ಮೈಸೂರಿನಲ್ಲಿ ಅಧಿಕಾರಿಗಳದ್ದೇ ದರ್ಬಾರ್, ನಮಗೆ ಗೌರವ ನೀಡುತ್ತಿಲ್ಲ: ಸಂಸದ ಯದುವೀರ್ ಅಸಮಾಧಾನ

ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ. ಸರ್ಕಾರಿ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾಗಿದೆ
 Yaduveer Wadiyar
ಯದುವೀರ್ ಒಡೆಯರ್
Updated on

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಭಾವನೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಚಾಮುಂಡಿ ಬೆಟ್ಟ ಪ್ರಾಧಿಕಾರದ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದರು.

ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರ ನ್ಯಾಯಾಲಯದಲ್ಲಿದೆ. ಚಾಮುಂಡಿ ಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾರ ಮಾತಿಗೂ ಬೆಲೆ‌ ಕೊಡುತ್ತಿಲ್ಲ. ಈ ಬಗ್ಗೆ ವ್ಯಾಪಕ ದೂರುಗಳು‌ ಕೇಳಿ ಬಂದಿವೆ. ಸ್ಥಳೀಯ ಆಡಳಿತ ಹಾಗೂ ಅಲ್ಲಿನ ನಿವಾಸಿಗಳ ಮಾತಿಗೂ ಪ್ರಾಧಿಕಾರದ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಸ್ಥಳೀಯ ನಿವಾಸಿಗಳ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಹರಿಹಾಯ್ದರು.

ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ. ಸರ್ಕಾರಿ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾಗಿದೆ. ಜನಪ್ರತಿನಿಧಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸಂಸದ ಯದುವೀರ್ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೂ ನಗರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ಕುರಿತು ಮಾತನಾಡಿದ ಅವರು ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಕ್ರಾಸಿಂಗ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಳಂಬವಾಗಿದ್ದ ಕಾರ್ಯಗಳಿಗೆ ಇಲಾಖೆಗಳ ಅನುಮತಿ ದೊರೆತಿದ್ದು, 15 ದಿನಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು.

 Yaduveer Wadiyar
KSIC ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರ: ಚಾಮರಾಜ ಕ್ಷೇತ್ರದಿಂದ ಕಣಕ್ಕಿಳಿಯುವ ಲೆಕ್ಕಾಚಾರ; ಈ ನೆಪದಲ್ಲಾದ್ರೂ ಯದುವೀರ್-ಪ್ರತಾಪ್ ಸಿಂಹ ಒಂದಾಗ್ತಾರಾ?

63 ಕೋಟಿ ರೂಪಾಯಿ ಯೋಜನೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ಮರಗಳನ್ನು ಸ್ಥಳಾಂತರ ಮಾಡಲು ಕೇರಳದ ಎನ್‌ಜಿಒ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಮೈಸೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಸದ‌ ಯದುವೀರ್, ಮೈಸೂರಿ ಹಲವೆಡೆ ಎಲ್ಲೆಂದರಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

ಈ ರೀತಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಲು ಯಾರು ಅನುನತಿ ನೀಡಿದರೋ ಗೊತ್ತಿಲ್ಲ. ಕೆಲವೇ ಮೀಟರ್ ಅಂತರದಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವ ಕಾರಣ ವಾಹ‌ನ ಸವಾರರಿಗೆ ತೊಂದರೆ ಆಗುತ್ತಿದೆ. ರಸ್ತೆಯಲ್ಲಿ ಸಂಚರಿಸಲು ಅನಗತ್ಯವಾಗಿ ವಿಳಂಬ ಆಗುತ್ತಿದೆ. ಸಿಗ್ನಲ್‌ ಲೈಟ್ ಅಳವಡಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com