ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಶಾಕ್: ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ POCSO ಅಡಿ ವರದಿ ಕಡ್ಡಾಯ: Dinesh Gundu rao

ಖಾಸಗಿ ಆಸ್ಪತ್ರೆಗಳು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು, ವಿಶೇಷವಾಗಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯ ಪ್ರಕರಣಗಳನ್ನು ವರದಿ ಮಾಡುವುದು ಕಡ್ಡಾಯವಾಗಿದೆ.
Dinesh Gundu rao
ಸಚಿವ ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಖಾಸಗಿ ಆಸ್ಪ್ರತ್ರೆಗಳಿಗೆ ರಾಜ್ಯಸರ್ಕಾರ ಶಾಕ್ ನೀಡಿದ್ದು, ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ POCSO ಕಾಯ್ದೆಯಡಿ ವರದಿ ಮಾಡುವುದು ಕಡ್ಡಾಯಗೊಳಿಸಿದ ಆದೇಶ ಹೊರಡಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್ ಅವರು, 'ಖಾಸಗಿ ಆಸ್ಪತ್ರೆಗಳು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು, ವಿಶೇಷವಾಗಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯ ಪ್ರಕರಣಗಳನ್ನು ವರದಿ ಮಾಡುವುದು ಕಡ್ಡಾಯವಾಗಿದೆ' ಎಂದು ತಿಳಿಸಿದ್ದಾರೆ.

ಅಂತೆಯೇ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಯಾವುದೇ ನಿರ್ಲಕ್ಷ್ಯ ಅಥವಾ ಕಾನೂನಿನ ಉಲ್ಲಂಘನೆಯನ್ನು ಸಹಿಸುವುದಿಲ್ಲ. ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಈ ನಿಟ್ಟಿನಲ್ಲಿ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ ಮತ್ತು ಪ್ರತಿಯೊಂದು ಖಾಸಗಿ ಆಸ್ಪತ್ರೆಯೂ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಕಡ್ಡಾಯವಾಗಿದೆ.

ಸಂತ್ರಸ್ಥರ ಗೌಪ್ಯತೆಯನ್ನು ಖಚಿತಪಡಿಸಿಕೊಳ್ಳುವುದು ನಿಖರವಾದ ದಾಖಲೆಗಳನ್ನು ನಿರ್ವಹಿಸುವುದು ಮತ್ತು ತನಿಖೆಗಳಿಗೆ ಸಂಪೂರ್ಣ ಸಹಕಾರವನ್ನು ನೀಡುವುದು ಸಂಬಂಧಪಟ್ಟ ಸಂಸ್ಥೆಗಳ ಕಡ್ಡಾಯ ಜವಾಬ್ದಾರಿಗಳಾಗಿವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

Dinesh Gundu rao
ರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU; ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ!

ಮಾತ್ರವಲ್ಲದೇ ಈ ನಿರ್ದೇಶನಗಳನ್ನು ಉಲ್ಲಂಘಿಸಿ ಅಂತಹ ಪ್ರಕರಣಗಳನ್ನು ಮರೆಮಾಚುವ ಯಾವುದೇ ಪ್ರಯತ್ನವು ಆಸ್ಪತ್ರೆ ಮತ್ತು ಒಳಗೊಂಡಿರುವ ವೈದ್ಯಕೀಯ ವೃತ್ತಿಪರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸುವುದು ಸೇರಿದಂತೆ ಕಠಿಣ ಕಾನೂನು ಕ್ರಮಕ್ಕೆ ಕಾರಣವಾಗುತ್ತದೆ.

ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಅಥವಾ ಕಾನೂನನ್ನು ಜಾರಿಗೊಳಿಸುವಲ್ಲಿ ಯಾವುದೇ ರಾಜಿ ಇರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿ. ಯಾವುದೇ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com