Auto LPG Crisis: ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್; ಮಾಡಿದ್ದೇನು?

ದಿನದ ದುಡಿಮೆ ನಂಬಿ ಜೀವನ ನಡೆಸುವ ಆಟೋ ಚಾಲಕರ ಕಷ್ಟಕ್ಕೆ ಮಿಡಿದ ಹಿರಿಯ ನಟ ವಿನೋದ್ ರಾಜ್ ಅವರು ಸಹಾಯ ಹಸ್ತ ಚಾಚಿದ್ದಾರೆ.
Auto LPG Crisis: Actor Vinod Raj distributes grocery kits to Auto drivers
ನಟ ವಿನೋದ್ ರಾಜ್
Updated on

ಬೆಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಆಟೋ ಎಲ್ ಪಿಜಿ ಕೊರತೆ ಎದುರಾಗಿದೆ. ಬೆಂಗಳೂರಿನಲ್ಲಿ ಎಲ್‌ಪಿಜಿ ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿದ್ದಾರೆ.

ದಿನದ ದುಡಿಮೆ ನಂಬಿ ಜೀವನ ನಡೆಸುವ ಆಟೋ ಚಾಲಕರ ಕಷ್ಟಕ್ಕೆ ಮಿಡಿದ ಹಿರಿಯ ನಟ ವಿನೋದ್ ರಾಜ್ ಅವರು ಸಹಾಯ ಹಸ್ತ ಚಾಚಿದ್ದಾರೆ.

ಬೆಂಗಳೂರಿನ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ತಾಯಿ ಡಾ.ಲೀಲಾವತಿ ಅವರ ಸಮಾಧಿ ಬಳಿ ವಿನೋದ್ ರಾಜ್ ಅವರು ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ ಮಾಡಿ, ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ.

Auto LPG Crisis: Actor Vinod Raj distributes grocery kits to Auto drivers
Video: ಆಟೋ ಚಾಲಕರ ಹೊಟ್ಟೆ ಮೇಲೆ ಹೊಡೆದ ಯುದ್ಧ; LPGಗಾಗಿ ಬೆಂಗಳೂರಿನಲ್ಲಿ ಕಿಲೋಮೀಟರ್‌ಗಟ್ಟಲೇ ಕ್ಯೂ!

ತಾಯಿ ಹೆಸರಿನಲ್ಲಿ ಆಟೋ ಚಾಲಕರಿಗೆ ಊಟ ಹಾಕಿ, ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ಆಟೋ ಚಾಲಕರ ಸಂಕಷ್ಟಕ್ಕೆ ತಮ್ಮ ಕೈಲಾದ ನೆರವು ಮಾಡುವ ಮ‌ೂಲಕ ಮಾನವೀಯತೆ ಮೆರೆದಿದ್ದಾರೆ. ನಟ ವಿನೋದ್ ರಾಜ್ ಕಾರ್ಯಕ್ಕೆ ಆಟೋ ಚಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com