

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.
ದಿಶಾ ರಾಜ್ಯಕ್ಕೆ ಫಸ್ಟ್
ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಅಧಿಕೃತ ವೆಬ್‌ಸೈಟ್ https://karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಫಲಿತಾಂಶ ಪಡೆಯಬಹುದು.
ಈ ಬಾರಿ ಡಿಜಿಲಾಕರ್‌ನಲ್ಲೂ ಫಲಿತಾಂಶ ಲಭ್ಯ
ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್ಸೈಟ್ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.
Advertisement